ಆಟಿಕೆ ಉತ್ಪಾದನೆ ಕುರಿತ ಪ್ರಧಾನಿ ಹೇಳಿಕೆ ವಾಸ್ತವವನ್ನು ಮರೆಮಾಚುವ ಕೆಲಸ- ನಿಖಿಲ್ ಗೌಡ ಟೀಕೆ

 ಆಟಿಕೆ ಉತ್ಪಾದನೆ ಕುರಿತ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ವಾಸ್ತವವನ್ನು ಮರೆ ಮಾಚುವ ಕೆಲಸ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ.
ನಿಖಿಲ್ ಗೌಡ
ನಿಖಿಲ್ ಗೌಡ

ಬೆಂಗಳೂರು: ಆಟಿಕೆ ಉತ್ಪಾದನೆ ಕುರಿತ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ವಾಸ್ತವವನ್ನು ಮರೆ ಮಾಚುವ ಕೆಲಸ
ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಸ್ಥಳೀಯರಿಗೆ ಆದ್ಯತೆ ಯೋಜನೆಗೆ ಬಲ ನೀಡಲು ಭಾರತದ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರನ್ನು ಕೊಪ್ಪಳದಲ್ಲಿ ಪ್ರಾರಂಭಿಸುತ್ತಿರುವುದಾಗಿ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೊಂಡಿದ್ದಾರೆ.ಭಾರತವನ್ನು ಆಟಿಕೆ ಉತ್ಪಾದನೆಯ ಕೇಂದ್ರಬಿಂದುವನ್ನಾಗಿ  ಮಾಡಲು ನೀಡಿದ್ದ ಕರೆಗೆ ಓಗೊಟ್ಟು ಮಾಡಿರುವ ಕೆಲಸವೆಂಬಂತೆ ಪ್ರಧಾನಿಗಳು ಇದನ್ನು ಹೇಳಿಕೊಂಡಿದ್ದಾರೆ. ಆದರೆ ಇದು ವಾಸ್ತವವನ್ನು  ಮರೆಮಾಚುವ ಕೆಲಸ ಎಂದಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಬುಕ್‌ನಲ್ಲಿ ಬರೆದಿಕೊಂಡಿರುವ ಅವರು,  ವಾಸ್ತವವೇನೆಂದರೆ 2018 ರಲ್ಲಿ ಕುಮಾರ ಸ್ವಾಮಿ ಸಿಎಂ ಆಗಿದ್ದಾಗ  ತಮ್ಮ ಕನಸಿನ ಕೂಸಾಗಿದ್ದ 'ಕಾಂಪೀಟ್ ವಿತ್ ಚೀನಾ' ಪರಿಕಲ್ಪನೆಯಡಿ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್ ಸ್ಥಾಪಿಸಲು 500 ಕೋಟಿ ರೂ ಅನುದಾನ ಬಿಡುಗಡೆ ಮಾಡಿ, 2019ರಲ್ಲಿ 2000 ಕೋಟಿ ರೂ ಅನುದಾನ ಒದಗಿಸಲು ನಿರ್ಧರಿಸಿದ್ದರು ಎಂದು ತಿಳಿಸಿದ್ದಾರೆ.

ಉತ್ಪಾದನಾ ವಲಯವನ್ನು ಉತ್ತೇಜಿಸಲು ಸ್ಥಳೀಯ ಸಂಪನ್ಮೂಲಗಳ ಬಳಕೆ, 9 ಜಿಲ್ಲೆಗಳಲ್ಲಿ ಕನಿಷ್ಠ 9 ಲಕ್ಷ ಸ್ಥಳೀಯರಿಗೆ ಉದ್ಯೋಗಾವಕಾಶ ಮತ್ತು ಅಸಮತೋಲನ ನಿವಾರಿಸುವ ಸಲುವಾಗಿ ಈ ಯೋಜನೆ ಜಾರಿಗೊಳಿಸಲಾಗಿತ್ತು.ಕೊಪ್ಪಳದಲ್ಲಿ ಆಟಿಕೆ, ಕಲಬುರಗಿಯಲ್ಲಿ ಸೋಲಾರ್ ವಿದ್ಯುತ್ ಉಪಕರಣ, ಹಾಸನದಲ್ಲಿ ಟೈಲ್ಸ್ ಮತ್ತು ಸ್ಯಾನಿಟರಿ ಉತ್ಪನ್ನ, ಮೈಸೂರಿನಲ್ಲಿ ಪಿಸಿಬಿ ತಯಾರಿಕೆ, ಬಳ್ಳಾರಿಯಲ್ಲಿ ವಸ್ತ್ರೋದ್ಯಮ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮೊಬೈಲ್ ಬಿಡಿಭಾಗಗಳ ತಯಾರಿಕೆ, ತುಮಕೂರಿನಲ್ಲಿ ಸ್ಪೋರ್ಟ್ಸ್ ಮತ್ತು ಫಿಟ್ನೆಸ್ ಉಪಕರಣ ತಯಾರಿಕಾ ಘಟಕಗಳನ್ನು ಸ್ಥಾಪಿಸಿ ಸ್ಥಳೀಯರಿಗೆ ಉದ್ಯೋಗ ನೀಡಲು ಮೈತ್ರಿ ಸರ್ಕಾರ ಮುಂದಾಗಿತ್ತು.

ಇದರ ಭಾಗವಾಗಿ ಪ್ರಾರಂಭವಾಗುತ್ತಿರುವ ಕೊಪ್ಪಳ ಆಟಿಕೆ ತಯಾರಿಕಾ ಕ್ಲಸ್ಟರ್ ಅಲ್ಲಿನ ಸ್ಥಳೀಯರಿಗೆ ಉದ್ಯೋಗ ನೀಡುವ ಮೂಲಕ ಉದ್ಯೋಗಕ್ಕಾಗಿ ಕೊಪ್ಪಳದ ಯುವ ಜನತೆ ಬೆಂಗಳೂರನ್ನು ಅವಲಂಬಿಸುವುದು ಕಡಿಮೆಯಾಗಲಿ, ಈ ಮೂಲಕ ತಮ್ಮ ಮಾತೃ ಜಿಲ್ಲೆಗಳಲ್ಲೇ ಯುವಕರಿಗೆ ಕೆಲಸ ಸಿಗುವಂತಾಗಲಿ ಎಂದು ಆಶಿಸುತ್ತೇನೆ ಎಂದು ನಿಖಿಲ್ ಗೌಡ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com