ರಾಜ್ಯ

ಕೊರೋನಾ ವೈರಸ್‌ ಸೋಂಕಿತರ ಮನೆಯ ಮುಂದೆ ಭಿತ್ತಿಪತ್ರ ಅಂಟಿಸುವ ನಿರ್ಧಾರ ಕೈಬಿಟ್ಟ ಬಿಬಿಎಂಪಿ

ಕೊರೋನಾ ವೈರಸ್‌ ಸೋಂಕಿತರ ಮನೆಯ ಮುಂದೆ ಭಿತ್ತಿಪತ್ರ ಅಂಟಿಸುವ ನಿರ್ಧಾರ ಕೈಬಿಟ್ಟ ಬಿಬಿಎಂಪಿ
ಸಂಗ್ರಹ ಚಿತ್ರ
Published On :

ಬೆಂಗಳೂರು: ಕೋವಿಡ್‌ ಸೋಂಕಿತರು ಸಮಾಜದಲ್ಲಿ ತಾರಮತ್ಯ ಎದುರಿಸುವುದನ್ನು ತಡೆಯಲು ಸೋಂಕಿತರ ಮನೆ ಮುಂದೆ ಭಿತ್ತಿ ಪತ್ರ ಅಂಟಿಸುವ ಯೋಜನೆಯನ್ನು ಕೈಬಿಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಸೋಂಕಿತ ವ್ಯಕ್ತಿಯ ಮನೆ ಮುಂದೆ ಭಿತ್ತಿಪತ್ರ ಅಂಟಿಸುವುದರಿಂದ ಮತ್ತು ಆ ಪ್ರದೇಶವನ್ನು ಸೀಲ್‌ಡೌನ್‌ ಮಾಡುವುದರಿಂದ ಆಸುಪಾಸಿನವರು ಸೋಂಕಿತರ ಮನೆಯವರನ್ನು ಕೆಟ್ಟದಾಗಿ ನೋಡುವ ಪರಿಸ್ಥಿತಿ ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಬದಲಿಗೆ, ಸೋಂಕಿತ ವ್ಯಕ್ತಿಯ ಕುರಿತು ಸುತ್ತ-ಮುತ್ತಲಿನ ಮನೆಯವರಿಗೆ ಮಾಹಿತಿ ನೀಡಲು ಅನುಮತಿ ನೀಡಿ  ಆದೇಶ ಹೊರಡಿಸುವಂತೆ ರಾಜ್ಯ ಸರ್ಕಾರವನ್ನು ಕೋರಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬರೋಬ್ಬರಿ 9860 ಮಂದಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,61341ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಇಂದು 113 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5950ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.