ಬೆಂಗಳೂರು: ಪೋಷಕರಿಗೆ ತಿಳಿಸದೆ ಪ್ರೀತಿಸಿ ವಿವಾಹವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ

ಪ್ರೀತಿಸಿ ವಿವಾಹವಾಗಿದ್ದ ಯುವತಿಯೊಬ್ಬಳು ಪತಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಪ್ರೀತಿಸಿ ವಿವಾಹವಾಗಿದ್ದ ಯುವತಿಯೊಬ್ಬಳು ಪತಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಬೇಲೂರು ಮೂಲದ ಸುಜಾತಾ ಆತ್ಮಹತ್ಯೆ ಮಾಡಿಕೊಂಡವರು. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಸುಶಾಂತ್ ಎಂಬಾತನನ್ನು ಪ್ರೀತಿಸುತ್ತಿದ್ದ ಸುಜಾತಾ ಬಳಿಕ ಮನೆಯವರಿಗೆ ತಿಳಿಸದೆ ಬೆಂಗಳೂರಿನಲ್ಲಿ ಮದುವೆಯಾಗಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. 

ಆರಂಭದಲ್ಲಿ ಅನ್ಯೋನ್ಯವಾಗಿದ್ದ ದಂಪತಿಯ ನಡುವೆ ಕ್ರಮೇಣ ಅಸಮಾಧಾನ, ಭಿನ್ನಾಭಿಪ್ರಾಯ ಉಂಟಾಗಿದೆ. ಈ ಮಧ್ಯೆ ಪತಿ ಸುಶಾಂತ್ ವರದಕ್ಷಿಣೆ ತರುವಂತೆ, ಪತ್ನಿಯ ಆಸ್ತಿ ನೀಡುವಂತೆ ಕೇಳುತ್ತಿದ್ದ. ಇದೇ ಕಾರಣದಿಂದ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎಂದು ಸುಜಾತಾ ಅವರ ಕುಟುಂಬದವರು ಆರೋಪಿಸಿದ್ದಾರೆ.

ಮೃತರ ತಂದೆ ಭದ್ರೇಗೌಡ ನೀಡಿದ ದೂರಿನ ಮೇರೆಗೆ ಆರೋಪಿ ಸುಶಾಂತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com