ಧಾರವಾಡದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೋವಿಡ್-19: ದ್ವಿಗುಣಗೊಳ್ಳಲು ಹೆಚ್ಚು ಸಮಯ

ಧಾರವಾಡ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಆದರೆ ಪ್ರಕರಣ ದ್ವಿಗುಣಗೊಳ್ಳಲು ಹೆಚ್ಟು ಸಮಯ ತೆಗೆದುಕೊಳ್ಳುತ್ತಿದೆ.
ಕಪಿಲೇಶ್ವರ ಕೆರೆಯ ಸುತ್ತ ಸ್ವಚ್ಛಗೊಳಿಸುತ್ತಿರುವ ಸಿಬ್ಬಂದಿ
ಕಪಿಲೇಶ್ವರ ಕೆರೆಯ ಸುತ್ತ ಸ್ವಚ್ಛಗೊಳಿಸುತ್ತಿರುವ ಸಿಬ್ಬಂದಿ

ಹುಬ್ಬಳ್ಳಿ:ಧಾರವಾಡ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಆದರೆ ಪ್ರಕರಣ ದ್ವಿಗುಣಗೊಳ್ಳಲು ಹೆಚ್ಟು ಸಮಯ ತೆಗೆದುಕೊಳ್ಳುತ್ತಿದೆ.

ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, ವೈರಸ್ ನಿಯಂತ್ರಿಸುವಲ್ಲಿ ಸಂಬಂಧಿತ ಆಡಳಿತ ಸಂಸ್ಥೆಯ ಸೂಕ್ತ ಕಾರ್ಯತಂತ್ರದ ಕೊರತೆಯೂ ಎದ್ದು ಕಾಣುತ್ತಿದೆ. ಆಗಸ್ಟ್ 8ರಲ್ಲಿ 5,773ರಷ್ಟಿದ್ದ ಪ್ರಕರಣಗಳ ಸಂಖ್ಯೆ ಸೆಪ್ಟೆಂಬರ್ ವೇಳೆಗೆ 11,512 ಆಗಿದೆ. ಪ್ರಕರಣಗಳು ದ್ವಿಗುಣಗೊಳ್ಳಲು 24 ದಿನಗಳನ್ನು ತೆಗೆದುಕೊಳ್ಳಲಾಗಿದೆ.

ಈ ಹಿಂದೆ 15 ದಿನಗಳಿಗೊಮ್ಮೆ ಪ್ರಕರಣಗಳು ದ್ವಿಗುಣಗೊಳ್ಳುತ್ತಿದ್ದವು. ಒಂಬತ್ತು ದಿನಗಳಲ್ಲಿ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು,ಮುಂಬರುವ ವಾರಗಳಲ್ಲಿ ಇದರ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಅಧಿಕಾರಿಗಳ ಅಭಿಪ್ರಾಯವಾಗಿದೆ.

ಕಳೆದ ಕೆಲವು ದಿನಗಳಲ್ಲಿ ಪ್ರತಿದಿನ 200 ರಿಂದ 300 ಪ್ರಕರಣಗಳು ಕಂಡುಬರುತ್ತಿದ್ದು, ಜನರು ಆತಂಕಕ್ಕೊಳಗಾಗಿದ್ದಾರೆ. ಆದಾಗ್ಯೂ, ಸೋಂಕು ನಿಯಂತ್ರಿಸುವಲ್ಲಿ ಸೂಕ್ತ ಕ್ರಮ ಕೈಗೊಂಡಿರುವುದಾಗಿ ಜಿಲ್ಲಾಡಳಿತ ಹೇಳುತ್ತಿದೆ.

ಜಿಲ್ಲಾಡಳಿತದ ಮಾಹಿತಿಯಂತೆ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಕ್ರಮವಾಗಿ 7,227 ಮತ್ತು 3,742 ಪ್ರಕರಣಗಳು ಕಂಡುಬಂದಿದ್ದು, ಎರಡು ತಿಂಗಳಲ್ಲಿ 10,969 ಪ್ರಕರಣಗಳು ಕಂಡುಬಂದಿವೆ. ಇದರಿಂದಾಗಿ ಈವರೆಗೂ ಒಟ್ಟಾರೇ ಸೋಂಕಿತರ ಸಂಖ್ಯೆ 11,512 ಆಗಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ತಜ್ಞರು ಹೇಳುತ್ತಿದ್ದಾರೆ.

ಆರೋಗ್ಯ, ಶಿಕ್ಷಣ ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಇಬ್ಬರು ಸಿಬ್ಬಂದಿಯನ್ನು ಜಿಲ್ಲೆಯ ಪ್ರತಿಯೊಂದು ವಾರ್ಡ್ ನಲ್ಲಿ ನಿಯೋಜಿಸುವ ಮೂಲಕ ಸಂಪರ್ಕಿತರನ್ನು ಪತ್ತೆ ಮಾಡಿ, ಪರೀಕ್ಷೆ ಮಾಡಲಾಗುತ್ತಿದೆ. ಇದರಲ್ಲಿ ಧಾರವಾಡ ಅಗ್ರ ಜಿಲ್ಲೆಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com