ಉಡುಪಿ: ಸೋಂಕಿತರ ಸಂಖ್ಯೆ ಏರುತ್ತಿದ್ದರೂ ಆಶಾಭಾವ ಮೂಡಿಸುತ್ತಿದೆ ಇಳಿಕೆಗೊಳ್ಳುತ್ತಿರುವ ಮರಣ ಪ್ರಮಾಣ!

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹಠಾತ್ ಏರಿಕೆ ಕಂಡಿದ್ದರೂ. ಮರಣ ಪ್ರಮಾಣದ ಇಳಿಕೆಯಾಗುತ್ತಿರುವುದು ಜನರಲ್ಲಿ ಆಶಾಭಾವನೆಗಳನ್ನು ಮೂಡಿಸುತ್ತಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಉಡುಪಿ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹಠಾತ್ ಏರಿಕೆ ಕಂಡಿದ್ದರೂ. ಮರಣ ಪ್ರಮಾಣದ ಇಳಿಕೆಯಾಗುತ್ತಿರುವುದು ಜನರಲ್ಲಿ ಆಶಾಭಾವನೆಗಳನ್ನು ಮೂಡಿಸುತ್ತಿದೆ. 

ಜಿಲ್ಲೆಯಲ್ಲಿ ಕೊರೋನಾ ಪರೀಕ್ಷೆ ನಡೆಸುತ್ತಿರುವ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಸೋಂಕಿತರನ್ನು ಶೀಘ್ರಗತಿಯಲ್ಲಿ ಪತ್ತೆ ಮಾಡುವುದರಿಂದ ಸಾವಿನ ಪ್ರಮಾಣ ಇಳಿಕೆಯಾಗುತ್ತಿದೆ. ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಶೇ.0.85ರಷ್ಟಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಜಿಲ್ಲೆಯಲ್ಲಿ ಲಕ್ಷಣ ರಹಿತ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಪರೀಕ್ಷೆಯ ಪ್ರಮಾಣ ಕೂಡ ಏರಿಕೆಯಾಗಿದೆ. ಸೋಂಕಿತರು ತಡವಾಗಿ ಆಸ್ಪತ್ರೆಗೆ ದಾಖಲಾಗುವುದರಿಂದ ವೆಂಟಿಲೇಟರ್ ಗಳ ಕೊರತೆ ಎದುರಾಗಲಿದೆ. ಅಲ್ಲದೆ, ಐಸಿಯುಗಳಿಗೆ ದಾಖಲಾಗುವ ಸೋಂಕಿತರ ಸಂಖ್ಯೆ ಕೂಡ ಏರಿಕೆಯಾಗಲಿದೆ. ಏನೇ ಆದರೂ ಪರಿಸ್ಥಿತ ಎದುರಿಸಲು ಜಿಲ್ಲೆ ಸಿದ್ಧವಿದೆ ಎಂದು ತಿಳಿಸಿದ್ದಾರೆ. 

ಈಗಾಗಲೇ ಸರ್ಕಾರ ಶೇ.50ರಷ್ಟು ಹಾಸಿಗೆಗಳನ್ನು ನೀಡುವಂತೆ ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. ಮೀಸಲಿರುವ ಹಾಸಿಕೆಗಳಲ್ಲಿ ಸೋಂಕಿತರನ್ನು ದಾಖಲು ಮಾಡಲಾಗುತ್ತಿದೆ. ಸ್ವತಃ ಖಾಸಗಿ ಆಸ್ಪತ್ರೆಗೆ ತೆರಳುವ ರೋಗಿಗಳು ಅವರೇ ಚಿಕಿತ್ಸೆಯ ವೆಚ್ಚವನ್ನು ಭರಿಸಬೇಕಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಹೇಳಿದ್ದಾರೆ. 

ಜಿಲ್ಲೆಯಲ್ಲಿ ಸೋಂಕಿತರಿಗೆ ಹಾಸಿಗೆಗಳ ಕೊರತೆಯಿಲ್ಲ. ವೆಂಟಿಲೇಟರ್ ಗಳ ಸಂಖ್ಯೆ ಹೆಚ್ಚಿಸುವುದು ಸಾಕಾಗುವುದಿಲ್ಲ. ತಜ್ಞರನ್ನೂ ನೇಮಕ ಮಾಡಿಕೊಳ್ಳುವ ಅಗತ್ಯವಿದೆ ಎಂದು ಡಾ.ಶಶಿಕಿರಣ್ ಉಮಾಕಾಂತ್ ಅವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com