ಸತ್ಯ ಶೋಧನಾ ಸಮಿತಿಯಿಂದ ಮುಖ್ಯಮಂತ್ರಿಗೆ ವರದಿ ಸಲ್ಲಿಕೆ
ರಾಜ್ಯ
ಬೆಂಗಳೂರು ಗಲಭೆ: ಮದನ್ ಗೋಪಾಲ್ ನೇತೃತ್ವದ ಸತ್ಯ ಶೋಧನಾ ಸಮಿತಿಯಿಂದ ಮುಖ್ಯಮಂತ್ರಿಗೆ ವರದಿ ಸಲ್ಲಿಕೆ
ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ನಿವೃತ್ತ ಅಪರ ಮುಖ್ಯಕಾರ್ಯದರ್ಶಿ ಮದನ್ ಗೋಪಾಲ್ ಅವರ ನೇತೃತ್ವದ ಸತ್ಯ ಶೋಧನಾ ಸಮಿತಿಯು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲಿಸಿತು
ಬೆಂಗಳೂರು: ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ನಿವೃತ್ತ ಅಪರ ಮುಖ್ಯಕಾರ್ಯದರ್ಶಿ ಮದನ್ ಗೋಪಾಲ್ ಅವರ ನೇತೃತ್ವದ ಸತ್ಯ ಶೋಧನಾ ಸಮಿತಿಯು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲಿಸಿತು.ಸಮಿತಿಯ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಆಗಸ್ಟ್ 11ರಂದು ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ಸಂಬಂಧಿಯೊಬ್ಬ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿಯಾಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು.
ಇದಾದ ಬಳಿಕ ಉಂಟಾದ ಪ್ರತಿಭಟನೆ ಹಿಂಸಾಚಾರಕ್ಕೆ ಸಿಲುಕಿ ಪೊಲೀಸ್ ಗೋಲಿಬಾರ್ ನಲ್ಲಿ ನಾಲ್ವರು ಮೃತಪಟ್ಟಿದ್ದರು.ಘಟನೆಯ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆ ಆರಂಭಗೊಂಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ