ಮಂಡ್ಯ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಮಲಗಿದ್ದಲ್ಲೇ ಇಬ್ಬರ ಬರ್ಬರ ಹತ್ಯೆ

ಮಂಡ್ಯ: ಮಲಗಿದ್ದಲ್ಲೇ ಇಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಯಲಿಯೂರು ಗ್ರಾಮದ ಇಟ್ಟಿಗೆ ಫ್ಯಾಕ್ಟರಿಯೊಂದರಲ್ಲಿ ಜರುಗಿದೆ.
ಯಲಿಯೂರು ಸಮೀಪದ ಚಲುವರಾಜ್ ಮಾಲೀಕತ್ವದ ಮಾರುತಿ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಬಸವರಾಜು (44) ಹಾಗೂ ರಾಮಮೂರ್ತಿ (46) ಕೊಲೆಯಾದರು.
ಬಸವರಾಜು ಶ್ರೀರಂಗಪಟ್ಟಣ ತಾಲೂಕಿನ ತಡಗವಾಡಿ ಗ್ರಾಮದವರಾಗಿದ್ದು, ರಾಮಮೂರ್ತಿ ಮೂಲತಃ ನೆಲಮಂಗಲ ಬಳಿಯ ಮರಳಗುಂಟೆ ಗ್ರಾಮದವರಾಗಿದ್ದಾರೆ. ಇಬ್ಬರೂ ಸುಮಾರು 8 ವರ್ಷಗಳಿಂದ ಈ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದಿನಂತೆಯೇ ಕೆಲಸ ಮುಗಿಸಿ ಅಲ್ಲೇ ಮಲಗುತ್ತಿದ್ದರು.ಆದರೆ ಇಂದು ಬೆಳಗ್ಗೆ ಇಟ್ಟಿಗೆ ಫ್ಯಾಕ್ಟರಿಗೆ ಹೋದಾಗ ಚಲುವರಾಜ್ ಅವರಿಗೆ ಕೆಲಸಗಾರರ ಜೊಡಿ ಕೊಲೆಯಾಗಿರುವುದು ಪತ್ತೆಯಾಗಿದೆ. ತಕ್ಷಣವೇ ಸ್ಥಳೀಯರಿಗೆ ಮತ್ತು ಪೊಲೀಸರಿಗೆ ತಿಳಿಸಿದ್ದಾರೆ.
ಸುದ್ದಿತಿಳಿದ ಮಂಡ್ಯ ಎಸ್ಪಿ ಪರಶುರಾಮ್, ಡಿವೈಎಸ್ಪಿ ನವೀನ್ಕುಮಾರ್, ಎಸ್ಐ ಸಿದ್ದರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಕಳೆದ ರಾತ್ರಿ ಇಬ್ಬರೂ ಬಾರ್ಗೆ ಹೋಗಿ ಎಣ್ಣೆ ತಂದು ಇಟ್ಟಿಗೆ ಫ್ಯಾಕ್ಟರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ವೇಳೆ ಗಲಾಟೆಯಾಗಿ ಈ ಇಬ್ಬರ ಕೊಲೆ ನಡೆದಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದು ಆರೋಪಿಗಳ ಪತ್ತೆಗಾಗಿ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ನಾಗಯ್ಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


