ಶಾಲೆಗಳು ಪುನರಾರಂಭಗೊಂಡ ಬಳಿಕ ವಿದ್ಯಾರ್ಥಿಗಳ ಬಸ್ ಪಾಸ್ ಸಬ್ಸಿಡಿ ಎಂದಿನಂತೆ ಮುಂದುವರೆಯಲಿದೆ: ಸರ್ಕಾರ 

ಶಾಲೆಗಳು ಪುನರಾರಂಭಗೊಂಡ ಬಳಿಕ ವಿದ್ಯಾರ್ಥಿಗಳ ಬಸ್ ಪಾಸ್ ಸಬ್ಸಿಡಿ ಎಂದಿನಂತೆ ಮುಂದುವರೆಯಲಿದೆ ಎಂದು ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಶಾಲೆಗಳು ಪುನರಾರಂಭಗೊಂಡ ಬಳಿಕ ವಿದ್ಯಾರ್ಥಿಗಳ ಬಸ್ ಪಾಸ್ ಸಬ್ಸಿಡಿ ಎಂದಿನಂತೆ ಮುಂದುವರೆಯಲಿದೆ ಎಂದು ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ. 

2020-21ನೇ ಸಾಲಿನ ವಿದ್ಯಾರ್ಥಿಗಳ ಬಸ್ ಪಾಸ್ ಸಬ್ಲಿಡಿಗಳನ್ನು ಸರ್ಕಾರ ರದ್ದು ಮಾಡುತ್ತಿದೆ ಎಂಬ ಸುದ್ದಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ಪ್ರಜಾಪ್ರಭುತ್ವ ವಿದ್ಯಾರ್ಥಿಗಳ ಸಂಘಟನೆಯು (ಎಐಡಿಎಸ್ಒ)ಯು ಸೆ.8 ರಂದು ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಂಡಿದೆ. ಆದರೆ, ಬಸ್ ಪಾಸ್ ಸಬ್ಸಿಡಿ ರದ್ದು ಮಾಡುವ ವಿಚಾರ ಸಂಬಂಧ ಈ ವರೆಗೂ ಸರ್ಕಾರ ಯಾವುದೇ ರೀತಿಯ ಅಧಿಕೃತ ಹೇಳಿಕೆ ನೀಡಿಲ್ಲ. 

ಈ ಬಗ್ಗೆ ಸರ್ಕಾರ ಯಾವುದೇ ರೀತಿಯ ಸ್ಪಷ್ಟನೆಗಳನ್ನೂ ನೀಡಿಲ್ಲ. ಶಾಲೆ ಹಾಗೂ ಕಾಲೇಜುಗಳು ಪುನರಾರಂಭಗೊಂಡ ಬಳಿಕ ಪಾಸ್ ಗಳನ್ನು ವಿತರಿಸಲಾಗುತ್ತದೆ ಎಂದು ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಅವರು ಹೇಳಿದ್ದಾರೆ, 

ಸಾರಿಗೆ ಸಚಿವ ಲಕ್ಷ್ಮಣ್ ಸವದಿಯವರು ಮಾತನಾಡಿ, ಪಾಸ್ ಗಳ ದರ ಏರಿಕೆ ಮಾಡುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ. ಬಸ್ ಪಾಸ್ ದರ ಏರಿಕೆಯಾಗುತ್ತದೆ ಎಂಬ ಆತಂಕ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಬೇಡ ಎಂದು ಹೇಳಿದ್ದಾರೆ. 

ಸಬ್ಸಿಡಿಗಳನ್ನು ಯಾವಾಗಲೂ ಹಣಕಾಸು ಇಲಾಖೆಯಿಂದ ನಿರ್ವಹಿಸಲಾಗುತ್ತದೆಯೇ ಹೊರತು ರಾಜ್ಯ ಸಾರಿಗೆ ಸಂಸ್ಥೆಗಳಿಂದ ನಿರ್ವಹಿಸಲಾಗುವುದಿಲ್ಲ. ಸಬ್ಸಿಡಿಗಳನ್ನು ರದ್ದುಗೊಳಿಸುವ ಬಗ್ಗೆ ಈ ವರೆಗೂ ಯಾವುದೇ ರೀತಿಯ ನಿರ್ಧಾರಗಳನ್ನು ಕೈಗೊಂಡಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com