ರಾಜ್ಯದಲ್ಲಿ ಇಂದು ಕೊರೋನಾಗೆ 128 ಬಲಿ, ಬೆಂಗಳೂರಿನಲ್ಲಿ 3093 ಸೇರಿ 9,746 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಶನಿವಾರ ಬರೋಬ್ಬರಿ 9,746 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,89,232ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಶನಿವಾರ ಬರೋಬ್ಬರಿ 9,746 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,89,232ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಇಂದು 128 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6298ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 34 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 128 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3093 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 9746 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಂದು 9102 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 2,83,298ಕ್ಕೆ ಏರಿಕೆಯಾಗಿದೆ. 99,617 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 769 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬೆಂಗಳೂರು ಹೊರತುಪಡಿಸಿದರೆ ಮೈಸೂರು ಹಾಗೂ ಬೆಳಗಾವಿಯಲ್ಲಿ ಅತಿ ಹೆಚ್ಚು ಪಾಸಿಟಿವ್‌ ಕೇಸ್‌ಗಳು ಕಂಡುಬಂದಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com