ರಾಜ್ಯದಲ್ಲಿ 1 ಲಕ್ಷದ ಸನಿಹಕ್ಕೆ ಸಕ್ರಿಯ ಕೊರೋನಾ ಪ್ರಕರಣ

ರಾಜ್ಯದಲ್ಲಿ ಶುಕ್ರವಾರ 9280 ಕೊರೋನಾ ಪ್ರಕರಣಗಳು ದೃಢಪಡುವುದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 99,101ಕ್ಕೆ ತಲುಪಿದೆ. ಇದೇ ವೇಳೆ 116 ಮಂದಿ ಸಾವನ್ನಪ್ಪುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ 6170ಕ್ಕೆ ತಲುಪಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 9280 ಕೊರೋನಾ ಪ್ರಕರಣಗಳು ದೃಢಪಡುವುದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 99,101ಕ್ಕೆ ತಲುಪಿದೆ. ಇದೇ ವೇಳೆ 116 ಮಂದಿ ಸಾವನ್ನಪ್ಪುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ 6170ಕ್ಕೆ ತಲುಪಿದೆ. 

ಶುಕ್ರವಾರ 9,280 ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಳ್ಳುವದರೊಂದಿಗೆ ರಾಜ್ಯದಲ್ಲಿ ಈ ವರೆಗೆ ಸೋಂಕಿತರ ಸಂಖ್ಯೆ 3.79 ಲಕ್ಷಕ್ಕೆ ತಲುಪಿದೆ, ಸಕ್ರಿಯ ಪ್ರಕರಣಗಳ ಪಟ್ಟಿಯಲ್ಲಿ ರಾಜ್ಯವು ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. 

ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಲ್ಲಿ ಪ್ರಸ್ತುತ ಕರ್ನಾಟಕಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಶುಕ್ರವಾರ 6161 ಮಂದಿ ಕೊರೋನಾ ಸೋಂಕಿನಿಂದ ಮುಕ್ತರಾಗುವುದರೊಂದಿಗೆ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 2.74 ಲಕ್ಷಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಶುಕ್ರವಾರ 3,192 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಒಟ್ಟು 31.97 ಲಕ್ಷ ಪರೀಕ್ಷೆ ನಡೆಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com