ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತ ಕಾಯುವಲ್ಲಿ ಸರ್ಕಾರ ವಿಫಲ: ಕಾಂಗ್ರೆಸ್ ಆರೋಪ

ಶಾಲೆಗಳನ್ನು ಪುನಾರಾರಂಭಿಸಲು ಸೂಕ್ತವಾದ ರೋಡ್ ಮ್ಯಾಪ್ ರೂಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಆರೋಪಿಸಿದೆ. ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶದ ಶಾಲಾ ಮಕ್ಕಳ ಬಗ್ಗೆ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ

ಬೆಂಗಳೂರು: ಶಾಲೆಗಳನ್ನು ಪುನಾರಾರಂಭಿಸಲು ಸೂಕ್ತವಾದ ರೋಡ್ ಮ್ಯಾಪ್ ರೂಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಆರೋಪಿಸಿದೆ. ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶದ ಶಾಲಾ ಮಕ್ಕಳ ಬಗ್ಗೆ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಗ್ರಾಮೀಣ ಭಾಗದ ಮಕ್ಕಳಿಗೆ ತಮ್ಮ ವಿದ್ಯಾಭ್ಯಾಸ ಮುಂದುವರಿಸಲು ಕಷ್ಟವಾಗುತ್ತಿದೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಕಾರ ರಾಜ್ಯದ 80 ಲಕ್ಷ ವಿದ್ಯಾರ್ಥಿಗಳಲ್ಲಿ ಕೇವಲ 62.5 ಪ್ರತಿಶತದಷ್ಟು ಜನರು ಮಾತ್ರ ಸ್ಮಾರ್ಟ್‌ಫೋನ್‌ಗಳು ಅಥವಾ ಲ್ಯಾಪ್‌ಟಾಪ್‌ಗಳನ್ನು ಹೊಂದಿದ್ದಾರೆ ಮತ್ತು ಕೇವಲ 53.75 ಪ್ರತಿಶತದಷ್ಟು ಜನರು ಮಾತ್ರ ಇಂಟರ್ನೆಟ್ ಪ್ರವೇಶವನ್ನು
ಹೊಂದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹಮದ್ ಮತ್ತು ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ  ಆನ್ ಲೈನ್ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿಲ್ಲ, ಹೀಗಾಗಿ ಸರ್ಕಾರ ಇವರ ಸಹಾಯಕ್ಕೆ ಬರಬೇಕು ಎಂದು ಆಗ್ರಹಿಸಿದ್ದಾರೆ. 

ವಿಜಯಪುರ, ಬೀದರ್, ಕಲಬುರಗಿ, ಬಳ್ಳಾರಿ, ಕೊಪ್ಪಳ, ಧಾರವಾಡ ಮತ್ತು ಇತರ ಜಿಲ್ಲೆಗಳ ಸುಮಾರು 13,500 ವಿದ್ಯಾರ್ಥಿಗಳು ವಿಧ್ಯಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ, ಅದರಲ್ಲಿ ಹೆಚ್ಚು ಬಾಲಕಿಯರಿದ್ದಾರೆ.

ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ವರದಿಯ ಪ್ರಕಾರ, ನಾಲ್ಕು ಶಾಲೆಗಳ ಪೈಕಿ ಮೂರು ಶಾಲೆಯಲ್ಲಿ ಕಂಪ್ಯೂಟರ್ ಹೊಂದಿಲ್ಲ ಮತ್ತು 72.74 ರಷ್ಟು ಶಾಲೆಗಳಲ್ಲಿ ಕಂಪ್ಯೂಟರ್ ಕಾರ್ಯನಿರ್ವಹಿಸುವ ಸ್ಥಿತಿಯಲ್ಲಿಲ್ಲ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ಮಕ್ಕಳು ಶಾಲೆಗೆ ಹೋಗುವುದರಿಂದ ಪೋಷಕರಿಗೆ ಸ್ವಲ್ಪ ಪ್ರಮಾಣದ ಹೊರೆ ಕಡಿಮೆಯಾಗುತ್ತದೆ, ಹೀಗಾಗಿ ಅವರಿಗೆ ಮಧ್ಯಹ್ನಾದ ಊಟ ಪೂರೈಸಬೇಕು ಎಂದು ಹೇಳಿದ್ದಾರೆ, ಇದರಿಂದ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುವುದು ತಪ್ಪುತ್ತದೆ ಎಂದು ಹೇಳಿದ್ದಾರೆ.

ಇನ್ನೂ 40 ಸಾವಿರ ಖಾಸಗಿ ಶಾಲೆ ಶಿಕ್ಷಕರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ವಿದ್ಯಾರ್ಥಿಳು ಪೂರ್ತಿ ಶುಲ್ಕ ಕಟ್ಟಲು ಸಾಧ್ಯವಾಗುತ್ತಿಲ್ಲ,  ಹೀಗಾಗಿ ಹಲವು ಶಾಲೆಗಳು ಶಿಕ್ಷಕರ ವೇತನ ಕಡಿತಗೊಳಿಸಲು ನಿರ್ಧರಿಸಿವೆ.

ಸಂಬಳ ಪಡೆಯದ ಸುಮಾರು ಎರಡು ಲಕ್ಷ ಶಿಕ್ಷಕರು ಸರ್ಕಾರದಿಂದ ವಿಶೇಷ ಪ್ಯಾಕೇಜ್ ಕೋರಿದ್ದಾರೆ ಎಂದು ಹೇಳಿದ್ದಾರೆ, ಹೀಗಾಗಿ ಸರ್ಕಾರ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನೆರವಿಗೆ ಬರಬೇಕೆಂದು ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com