ಖಾಸಗಿ ಶಾಲೆಗಳ ದಾಖಲಾತಿಗೆ ಸರ್ಕಾರ ಗ್ರೀನ್ ಸಿಗ್ನಲ್: ಮೊದಲ ಕಂತಿನ ಶುಲ್ಕವಷ್ಟೇ ಸಂಗ್ರಹಕ್ಕೆ ಸಮ್ಮತಿ

ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಶಾಲೆಗಳು ಹಾಗೂ ವೇತನ ದೊರಯದೆ ಸಮಸ್ಯೆಗೆ ಸಿಲುಕಿರುವ ಶಿಕ್ಷಕರ ಹಿತದೃಷ್ಟಿಯಿಂದ ಪ್ರಸಕ್ತ ಸಾಲಿನ (2020-21) ಶಾಲಾ ಶುಲ್ಕದ ಪ್ರಥಮ ಕಂತು ಪಡೆಯಲು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. 
ಸಚಿವ ಸುರೇಶ್ ಕುಮಾರ್
ಸಚಿವ ಸುರೇಶ್ ಕುಮಾರ್

ಬೆಂಗಳೂರು: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಶಾಲೆಗಳು ಹಾಗೂ ವೇತನ ದೊರಯದೆ ಸಮಸ್ಯೆಗೆ ಸಿಲುಕಿರುವ ಶಿಕ್ಷಕರ ಹಿತದೃಷ್ಟಿಯಿಂದ ಪ್ರಸಕ್ತ ಸಾಲಿನ (2020-21) ಶಾಲಾ ಶುಲ್ಕದ ಪ್ರಥಮ ಕಂತು ಪಡೆಯಲು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. 

ಪೋಷಕರಿಂದ ಶುಲ್ಕ ಸ್ವೀಕರಿಸದಂತೆ ತಡೆಹಿಡಿಯುವುದು, ಆರ್'ಟಿಇ ಅನುದಾನ ಬಿಡುಗಡೆ ಮಾಡದಿರುವುದು ಸೇರಿದಂತೆ ಕೆಲವು ಅವೈಜ್ಞಾನಿಕ ಕ್ರಮಗಳನ್ನು ಅನುಸರಿಸುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿ ಖಾಸಗಿ ಶಿಕ್ಷಣ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್) ಶನಿವಾರ ಕರಾಳ ಶಿಕ್ಷಣ ದಿನಾಚರಣೆ ನಡೆಸಿತು. 

ಕಪ್ಪು ಪಟ್ಟಿ ಥರಿಸಿ ವಿವಿಧ ಶಾಲಾ ಶಿಕ್ಷಕರು ನಗರದ ಶಿಕ್ಷಕರ ಸದನದ ಆವರಣದಲ್ಲಿ ಶಿಕ್ಷಕ ವಿರೋಧ ಸರ್ಕಾರ ಎಂಬ ಭಿತ್ತಿ ಪತ್ರಗಳೊಂದಿಗೆ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರಿಗೆ ಸ್ಪಂದಿಸಿದ ಶಿಕ್ಷಣ ಸಚಿವರು, ಬೇಡಿಕೆ ಈಡೇರಿಸುವ ಭರವಸೆಯನ್ನು ನೀಡಿದರು. 

ಈ ಬೆಳವಣಿಗೆ ಬಳಿಕ ಆದೇಶದ ಹೊರಡಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಖಾಸಗಿ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಪ್ರಾರಂಭಿಸಲು ಮತ್ತು ಪೋಷಕರಿಂದ ಶುಲ್ಕ ಪಡೆಯಲು ಅನುಮತಿ ನೀಡಿದ್ದಾರೆ.

ಪ್ರಸಕ್ತ ಸಾಲಿನ ಶಾಲಾ ಶುಲ್ಕದ ಪ್ರಥಮ ಕಂತು ಪಡೆಯಲು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ನೀಡಲಾಗಿದೆ. ಪೋಷಕರಿಗೂ ಇದರಿಂದ ಹೊರೆಯಾಗಬಾರದು ಎಂಬ ಕಾರಣಕ್ಕೆ ಪ್ರಸಕ್ತ ಸಾಲಿನ ಶಾಲಾ ಶುಲ್ಕದಲ್ಲಿ ಮೊದಲ ಕಂತು ಮಾತ್ರ ಪಡೆಯಲು ಅವಕಾಶ ನೀಡಲಾಗಿದೆ. ಈ ಹಣದಲ್ಲಿ ತಮ್ಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಬೋಧಕ/ಬೋಧಕೇತರ ಸಿಬ್ಬಂದಿಗೆಯ ವೇತನವನ್ನು ಕಡ್ಡಾಯವಾಗಿ ಪಾವತಿಸಬೇಕು. ವೇತನ ನೀಡುವ ಸಂಬಂಧ ಯಾವುದೇ ದೂರುಗಳು ಬಾರದಂತೆ ನೋಡಿಕೊಳ್ಳಬೇಕೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com