ಹಾಸನದಲ್ಲಿ ವೃದ್ಧ ದಂಪತಿ ಹತ್ಯೆ: ಮತ್ತೆ ಆರು ಆರೋಪಿಗಳ ಬಂಧನ

ವೃದ್ಧ ದಂಪತಿಯನ್ನು ಹತ್ಯೆ ಮಾಡಿ ಹಣ, ಚಿನ್ನಾಭರಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ಪೊಲೀಸರು ಮತ್ತೆ ಆರು ಆರೋಪಿಗಳನ್ನು ಭಾನುವಾರ ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಹಾಸನ: ವೃದ್ಧ ದಂಪತಿಯನ್ನು ಹತ್ಯೆ ಮಾಡಿ ಹಣ, ಚಿನ್ನಾಭರಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ಪೊಲೀಸರು ಮತ್ತೆ ಆರು ಆರೋಪಿಗಳನ್ನು ಭಾನುವಾರ ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಚನ್ನರಾಯಪಟ್ಟಣದ ಮಂಜಶೆಟ್ಟಿ(23), ಪ್ರಸಾದ್(25), ನಂದನ್ ಕುಮಾರ್(33), ಯೋಗಾನಂದ(29), ಭರತ್(24) ಹಾಗೂ ಮಧು(25) ಬಂಧಿತ ಆರೋಪಿಗಳಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಅವರು ನೀಡಿದ ಆರೋಪದ ಮೇಲೆ ಇಂದು ಮತ್ತೆ ಆರು ಮಂದಿಯನ್ನು ಬಂಧಿಸಿದ್ದಾರೆ.

ನಗರದ ಹೊರವಲಯದ ಆಲಗೋಡನಹಳ್ಳಿ ತೋಟದ ಮನೆಯಲ್ಲಿ ವಾಸವಿದ್ದ ವೃದ್ಧ ದಂಪತಿಗಳಾದ ಮುರುಳೀಧರ್(71) ಹಾಗೂ ಉಮಾದೇವಿ(67) ಅವರನ್ನು ಎರಡು ದಿನಗಳ ಹಿಂದೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com