ರಾಜ್ಯ

ಕೊರೋನಾ ಭೀತಿ ನಡುವಲ್ಲೇ ನಾಳೆಯಿಂದ ನಮ್ಮ ಮೆಟ್ರೋ ಸಂಚಾರ ಆರಂಭ: ಪ್ರಯಾಣಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಂಡ ಅಧಿಕಾರಿಗಳು

ಕೊರೋನಾ ಭೀತಿ ನಡುವಲ್ಲೇ ನಾಳೆಯಿಂದ ನಮ್ಮ ಮೆಟ್ರೋ ಸಂಚಾರ ಆರಂಭ: ಪ್ರಯಾಣಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಂಡ ಅಧಿಕಾರಿಗಳು
ಸಂಗ್ರಹ ಚಿತ್ರ
Published On :

ಬೆಂಗಳೂರು: ಕೊರೋನಾ ಭೀತಿ ನಡುವಲ್ಲೇ ನಮ್ಮ ಮೆಟ್ರೋ ರೈಲು ಸೋಮವಾರದಿಂದ ಸಂಚಾರ ಆರಂಭಿಸಲಿದ್ದು, ಈಗಾಗಲೇ ಪೂರ್ವ ಸಿದ್ಥತೆಗಳನ್ನು ಕೈಗೊಳ್ಳಲಾಗಿದೆ. 

ಮಾರ್ಚ್ 22 ರಂದು ಮೆಟ್ರೋ ರೈಲು ಸಂಚಾರ ಸ್ಥಗಿತಗೊಳಿಸಿದ ನಂತರ 5 ತಿಂಗಳ ಬಳಿಕ ಸೋಮವಾರ ಸಂಚಾರ ಆರಂಬಿಸಲಿದೆ. ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಕೇವಲ ಒಂದು ಮಾರ್ಗದಲ್ಲಿ ಮಾತ್ರ ಬೆಳಿಗ್ಗೆ 8 ಗಂಟೆಗೆ ಬೈಯ್ಯಪ್ಪನ ಹಳ್ಳಿ-ಮೈಸೂರು ರಸ್ತೆ ಮತ್ತು ಮೈಸೂರು ರಸ್ತೆ-ಬೈಯ್ಯಪ್ಪನಹಳ್ಳಿ ನಡುವೆ ರೈಲು ಸಂಚಾರ ಪ್ರಾರಂಭವಾಗಲಿದೆ. ಬೆಳಿಗ್ಗೆ 8ರಿಂದ 11ರವರೆಗೆ ಮತ್ತು ಸಂಜೆ 4.30ರಿಂದ 7.30ರವರೆಗೆ ತಲಾ 5 ನಿಮಿಷಗಳ ಅಂತರದಲ್ಲಿ ರೈಲುಗಳು ಕಾರ್ಯನಿರ್ವಹಿಸಲಿವೆ. 

ಸೆ.7ರಿಂದ 10ರವರೆಗೆ ನೇರಳೆ ಮಾರ್ಗದಲ್ಲಿ ಮಾತ್ರ ಮೆಟ್ರೋ ರೈಲು ಸಂಚರಿಸಲಿದ್ದು ಸೆ.9 ಮತ್ತು 10ರಂದು ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸಂಚರಿಸಲಿದೆ. ಬಳಿಕ ಎರಡೂ ಮಾರ್ಗದಲ್ಲಿ ಸಂಚಾರ ಪೂರ್ಣಪ್ರಮಾಣದಲ್ಲಿ ಆರಂಭವಾಗಲಿದೆ. 

ಟೋಕನ್ ಮಾರಾಟಕ್ಕೆ ಅನುಮತಿ ಇಲ್ಲದ ಕಾರಣ ಸ್ಮಾರ್ಟ್ ಕಾರ್ಡ್'ಗಳಿಂದ ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಆರು ಬೋಗಿಗಳ ಒಂದು ಮೆಟ್ರೋ ರೈಲಿನಲ್ಲಿ ಕೇವಲ 400 ಜನರು ಮಾತ್ರ ಏಕಕಾಲದಲ್ಲಿ ಪ್ರಯಾಣಿಸಬಹುದಾಗಿದೆ. 

ಪ್ರತೀ ಮೆಟ್ರೋ ನಿಲ್ದಾಣದಲ್ಲೂ ಥರ್ಮೋಸ್ಟಾಟ್ ಗಳನ್ನು ಇರಿಸಲಾಗಿದ್ದು, ನಿಲ್ದಾಣಕ್ಕೆ ಬರುವ ಪ್ರಯಾಣಿಕರು ಮೊದಲು ತಮ್ಮ ಕೈಯನ್ನು ಥರ್ಮೋಸ್ಟಾಟ್‌ನಿಂದ 3-ಸೆಂ.ಮೀ ದೂರದಲ್ಲಿ ಇಡಬೇಕು. ಪರಿಶೀಲನೆ ಬಳಿಕ ಈ ಧರ್ಮೋಸ್ಟಾಟ್ ಪ್ರಯಾಣಿಕರಿಗೆ ಪ್ರಯಾಣಿಸಲು ಅನುಮತಿ ನೀಡುತ್ತದೆ. ಅನುಮತಿ ಬಳಿಕವಷ್ಟೇ ಪ್ರಯಾಣಿಕರು ಮೆಟ್ರೋ ರೈಲಿನಲ್ಲಿ ಸಂಚಾರ ನಡೆಸಬಹುದಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.