ವಿಜಯಪುರ: ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ರವಿಗೌಡ ಪಾಟೀಲ್ ಕೊರೋನಾಗೆ ಬಲಿ

ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ರವಿಗೌಡ ಪಾಟೀಲ್ ಕೊರೋನಾ ವೈರಸ್ ಗೆ ಬಲಿಯಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ರವಿಗೌಡ ಪಾಟೀಲ್ ಕೊರೋನಾ ವೈರಸ್ ಗೆ ಬಲಿಯಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.

ಕಳೆದ ವಾರ ಕೊರೋನಾ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸೋಲಾಪುರ ನಂತರ ಪುಣೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಭಾನುವಾರ ಪುಣೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳುತಿಳಿಸಿವೆ.

ಎರಡು ವಾರಗಳ ಹಿಂದೆ ರವಿಗೌಡ ಅವರ ತಂದೆ ದೀರ್ಘಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾಗಿದ್ದರು, 2013 ರಲ್ಲಿ ಕಾಂಗ್ರೆಸಿ ಜಿಲ್ಲಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com