ಐಎಂಎ ಹಗರಣ: 2 ಸರ್ಕಾರಿ ಅಧಿಕಾರಿಗಳ ವಿರುದ್ಧ ಸಿಬಿಐ ಚಾರ್ಜ್'ಶೀಟ್

ಐಎಂಎ ಕಂಪನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸರ್ಕಾರಿ ಅಧಿಕಾರಿಗಳ ವಿರುದ್ಧ ಸಿಬಿಐ ಚಾರ್ಜ್'ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಐಎಂಎ ಕಂಪನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸರ್ಕಾರಿ ಅಧಿಕಾರಿಗಳ ವಿರುದ್ಧ ಸಿಬಿಐ ಚಾರ್ಜ್'ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ರೂ. 4,000 ಕೋಟಿ ವಂಚನೆ ಪ್ರಕರಣದಲ್ಲಿ ಬೆಂಗಳೂರು ಉತ್ತರ ತಾಲ್ಲೂಕು ಉಪವಿಭಾಗಾಧಿಕಾರಿಯಾಗಿದ್ದ  ಎಲ್‌.ಸಿ.ನಾಗರಾಜ್‌ ಹಾಗೂ ಗ್ರಾಮ ಲೆಕ್ಕಿಗ ಮಂಜುನಾಥ್‌ ಎನ್‌. ವಿರುದ್ಧ ತನಿಖೆಗೆ ರಾಜ್ಯ ಸರ್ಕಾರದ ಒಪ್ಪಿಗೆ ಪಡೆದ ಬಳಿಕ ಸಿಬಿಐ ಈ ದೋಷಾರೋಪ ಪಟ್ಟಿ ದಾಖಲಿಸಿದೆ ಎಂದು ತಿಳಿದುಬಂದಿದೆ. 

ಐಎಂಎ ಕಂಪನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲೀನ್‌ಚಿಟ್‌ ನೀಡಲು ಆರೋಪಿ ಮನ್ಸೂರ್ ಖಾನ್‌ನಿಂದ ನಾಗರಾಜ್‌ ರೂ.4.5 ಕೋಟಿ ಹಾಗೂ ಮಧ್ಯವರ್ತಿಯಾಗಿದ್ದ ಮಂಜುನಾಥ್‌ ರೂ.10 ಲಕ್ಷ ಲಂಚ ಪಡೆದಿದ್ದರು ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com