ಐಎಂಎ ಹಗರಣ‌: ಇಬ್ಬರು ಸರ್ಕಾರಿ ಅಧಿಕಾರಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ

ಬಹುಕೋಟಿ ರೂಪಾಯಿ ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ತಂಡ-ಸಿಬಿಐ, ಇಬ್ಬರು ಸರ್ಕಾರಿ ಅಧಿಕಾರಿಗಳ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮಂಗಳವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬಹುಕೋಟಿ ರೂಪಾಯಿ ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ತಂಡ-ಸಿಬಿಐ, ಇಬ್ಬರು ಸರ್ಕಾರಿ ಅಧಿಕಾರಿಗಳ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮಂಗಳವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿಯಾಗಿದ್ದ ಎಲ್‌. ಸಿ. ನಾಗರಾಜ್‌ ಮತ್ತು ಗ್ರಾಮ ಲೆಕ್ಕಾಧಿಕಾರಿ ಎನ್. ಮಂಜುನಾಥ್ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ.

ಕಳೆದ ಜೂನ್ ತಿಂಗಳಿನಲ್ಲಿ ಐಎಎಸ್ ಅಧಿಕಾರಿ ಬಿ.ವಿಜಯ್ ಶಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಉಳಿದ ಇಬ್ಬರು ಆರೋಪಿಗಳ ವಿರುದ್ಧ ಈಗ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ ಸಲ್ಲಿಸಿದೆ.

ಐಎಂಎ ಸಂಸ್ಥಾಪಕ ಮನ್ಸೂರ್‌ ಖಾನ್‌ನಿಂದ ಈ ಇಬ್ಬರು ಅಧಿಕಾರಿಗಳು ಲಂಚ ಪಡೆದಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

ಐಎಂಎ ಪರವಾಗಿ ವರದಿ ನೀಡಲು ಎಲ್. ಸಿ. ನಾಗರಾಜ್ 4.5 ಕೋಟಿ ರೂ. ಲಂಚ ಪಡೆದಿದ್ದಾರೆ. ಎಲ್. ಸಿ. ನಾಗರಾಜ್ ಮತ್ತು ಮನ್ಸೂರ್ ಖಾನ್ ಪರಿಚಯ ಮಾಡಿಸಿದ್ದ ಗ್ರಾಮ ಲೆಕ್ಕಾಧಿಕಾರಿ ಎನ್. ಮಂಜುನಾಥ್ 10 ಲಕ್ಷ ಲಂಚ ಪಡೆದಿದ್ದಾರೆ ಎಂದು ಸಿಬಿಐ ಹೇಳಿದೆ.

ಐಎಂಎ ಹಗರಣದಲ್ಲಿ ಎಲ್. ಸಿ. ನಾಗರಾಜ್, ಜಿಲ್ಲಾಧಿಕಾರಿಯಾಗಿದ್ದ ಬಿ. ಎಂ. ವಿಜಯ್ ಶಂಕರ್, ಗ್ರಾಮ ಲೆಕ್ಕಿಗ ಎನ್. ಮಂಜುನಾಥ್ ಆರೋಪಿಯಾಗಿದ್ದು, ಕಂಪನಿಯ ಪರವಾಗಿ ವರದಿ ನೀಡಲು ವಿಜಯ ಶಂಕರ್ ಅವರು 1.5 ಕೋಟಿ ರೂ. ಲಂಚ ಪಡೆದಿದ್ದಾರೆ ಎಂಬ ಆರೋಪವಿತ್ತು. ಆದರೆ ಅವರು ಕಳೆದ ಜೂನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com