ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸಿದ್ದಾರೂಢ ಸ್ವಾಮೀಜಿ ಹೆಸರು ನಾಮಕರಣಕ್ಕೆ ಕೇಂದ್ರ ಅಸ್ತು

ಕರ್ನಾಟಕದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಒಂದಾದ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಶ್ರೀಸಿದ್ದಾರೂಢ ಸ್ವಾಮೀಜಿ ಅವರ ಹೆಸರು ನಾಮಕರಣ ಮಾಡಲು ಕೇಂದ್ರ ಗೃಹ ಇಲಾಖೆ ಆದೇಶಿಸಿದೆ.  ಈ ಸಂಬಂಧ ಕೇಂದ್ರವು ರಾಜ್ಯದ ಕಂದಾಯ ಇಲಾಖೆಗೆ ಪತ್ರ ಕಳಿಸಿದೆ. 
ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸಿದ್ದಾರೂಢ ಸ್ವಾಮೀಜಿ ಹೆಸರು ನಾಮಕರಣಕ್ಕೆ ಕೇಂದ್ರ ಅಸ್ತು

ಹುಬ್ಬಳ್ಲಿ: ಕರ್ನಾಟಕದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಒಂದಾದ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಶ್ರೀಸಿದ್ದಾರೂಢ ಸ್ವಾಮೀಜಿ ಅವರ ಹೆಸರು ನಾಮಕರಣ ಮಾಡಲು ಕೇಂದ್ರ ಗೃಹ ಇಲಾಖೆ ಆದೇಶಿಸಿದೆ.  ಈ ಸಂಬಂಧ ಕೇಂದ್ರವು ರಾಜ್ಯದ ಕಂದಾಯ ಇಲಾಖೆಗೆ ಪತ್ರ ಕಳಿಸಿದೆ. 

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಲ್ಲದೆ ಗೃಹ ಸಚಿವ ಅಮಿತ್ ಶಾ ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್  ಅವರುಗಳಿಗೆ ಧನ್ಯವಾದ ಹೇಳಿದ್ದಾರೆ.

"ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಹೆಸರನ್ನು ಸಿದ್ದಾರೂಢ  ಸ್ವಾಮಿಜಿ ರೈಲ್ವೆ ನಿಲ್ದಾಣ, ಹುಬ್ಬಳ್ಳಿ ಎಂದು  ಬದಲಾಯಿಸಲು ಅನುಮೋದನೆ ನೀಡಿದ್ದಕ್ಕಾಗಿಗೃಹಸಚಿವ ಅಮಿತ್ ಶಾ ಹಾಗೂ ಪಿಯೂಷ್‌ಗೋಯಲ್ ಅವರಿಗೆ ಧನ್ಯವಾದಗಳು. 

"ಇದು ಸ್ಥಳೀಯ ಜನರು ಮತ್ತು ರಾಜ್ಯ ನಾಯಕರ ದೀರ್ಘಕಾಲದ ಬೇಡಿಕೆಯಾಗಿದ್ದು ಇಂದು ಈಡೇರಿದೆ" ಎಂದು ಸಚಿವ ಸುರೇಶ್ ಅಂಗಡಿ ಟ್ವೀಟ್ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com