ಆಟೋ ಓಡಿಸುತ್ತಿದ್ದ ಆರೋಗ್ಯಾಧಿಕಾರಿ ರವೀಂದ್ರನಾಥ್ ಗೆ ಹುದ್ದೆ ನಿಯೋಜನೆ: ಶ್ರೀರಾಮುಲು

ಜಿಲ್ಲಾ ಆರ್ ಸಿಹೆಚ್ ಅಧಿಕಾರಿ ಡಾ. ಎಂ ಎಚ್ ರವೀಂದ್ರನಾಥ್ ಅವರು ದಾವಣಗೆರೆಯಲ್ಲಿ ಬದುಕು ನಿರ್ವಹಣೆಗಾಗಿ ಆಟೋ ಓಡಿಸುತ್ತಿದ್ದಾರೆ ಎಂಬ ಮಾಧ್ಯಮ ವರದಿಗಳು ಗಮನಕ್ಕೆ ಬಂದಕೂಡಲೇ ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದೆ. 
ಆಟೋ ಓಡಿಸುತ್ತಿದ್ದ ಆರೋಗ್ಯಾಧಿಕಾರಿ ರವೀಂದ್ರನಾಥ್ ಗೆ ಹುದ್ದೆ ನಿಯೋಜನೆ: ಶ್ರೀರಾಮುಲು
ಆಟೋ ಓಡಿಸುತ್ತಿದ್ದ ಆರೋಗ್ಯಾಧಿಕಾರಿ ರವೀಂದ್ರನಾಥ್ ಗೆ ಹುದ್ದೆ ನಿಯೋಜನೆ: ಶ್ರೀರಾಮುಲು
Updated on: 

ಬೆಂಗಳೂರು: ಜಿಲ್ಲಾ ಆರ್ ಸಿಹೆಚ್ ಅಧಿಕಾರಿ ಡಾ. ಎಂ ಎಚ್ ರವೀಂದ್ರನಾಥ್ ಅವರು ದಾವಣಗೆರೆಯಲ್ಲಿ ಬದುಕು ನಿರ್ವಹಣೆಗಾಗಿ ಆಟೋ ಓಡಿಸುತ್ತಿದ್ದಾರೆ ಎಂಬ ಮಾಧ್ಯಮ ವರದಿಗಳು ಗಮನಕ್ಕೆ ಬಂದಕೂಡಲೇ ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದೆ. 

ಅಂತೆಯೇ ವರದಿ ಪರಿಶೀಲನೆ ಬಳಿಕ ರವೀಂದ್ರನಾಥ್ ಅವರನ್ನು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನಿಯೋಜಿಸಲಾಗಿದೆ. ಹಗಲಿರುಳು ಶ್ರಮಿಸುವ ಎಲ್ಲಾ ವೈದ್ಯರ ಹಿತಾಸಕ್ತಿ ಕಾಪಾಡಲು ನಮ್ಮ ಸರ್ಕಾರ ಬದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಐಎಎಸ್ ಅಧಿಕಾರಿಗಳ ನಡವಳಿಕೆಯಿಂದ ಬೇಸತ್ತಿದ್ದ ವೈದ್ಯ ಡಾ.ರಾಘವೇಂದ್ರ ಜೀವನೋಪಯಕ್ಕಾಗಿ ಆಟೋ‌ ಚಾಲನೆ ವೃತ್ತಿಗೆ ಇಳಿದಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. 

ರಾಘವೇಂದ್ರರನ್ನು ಕೊಪ್ಪಳ ಜಿಲ್ಲೆಯ ಕುಟುಂಬ ಕಲ್ಯಾಣಾಧಿಕಾರಿಯಾಗಿ ನೇಮಕ ಮಾಡಿ ಸರಕಾರದ ಆದೇಶ ಹೊರಡಿಸಿದೆ. ಈ ಹಿಂದೆ ಕಲಬುರಗಿ ಜಿಲ್ಲೆ ಸೇಡಂನ ಸಾರ್ವಜನಿಕ ಆಸ್ಪತ್ರೆಯ ಹಿರಿಯ ವೈದ್ಯಾ ಧಿಕಾರಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com