ಪ್ರಶಾಂತ್ ಸಂಬರಗಿ ವಿರುದ್ಧ ಜಮೀರ್ ಕೇಸ್: ನಳಿನ್ ಕುಮಾರ್ ಕಟೀಲ್ ಆಕ್ಷೇಪ 

ಡ್ರಗ್ಸ್ ವಿರುದ್ಧ ಧ್ವನಿ ಎತ್ತಿದ ಪ್ರಶಾಂತ್ ಸಂಬರಗಿ ವಿರುದ್ಧ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಪ್ರಕರಣ ದಾಖಲಿಸಿದ್ದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.
ನಳಿನ್ ಕುಮಾರ್ ಕಟೀಲ್, ಜಮೀರ್ ಅಹ್ಮದ್
ನಳಿನ್ ಕುಮಾರ್ ಕಟೀಲ್, ಜಮೀರ್ ಅಹ್ಮದ್
Updated on: 

ಬೆಂಗಳೂರು: ಡ್ರಗ್ಸ್ ವಿರುದ್ಧ ಧ್ವನಿ ಎತ್ತಿದ ಪ್ರಶಾಂತ್ ಸಂಬರಗಿ ವಿರುದ್ಧ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಪ್ರಕರಣ ದಾಖಲಿಸಿದ್ದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡ್ರಗ್ಸ್ ವಿರುದ್ಧ ಧ್ವನಿ ಎತ್ತಿದ ಪ್ರಶಾಂತ್ ಸಂಬರಗಿ ವಿರುದ್ಧ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಕೇಸ್ ಹಾಕುತ್ತಾರೆ ಎಂದರೆ ಈ ಕಾಂಗ್ರೆಸ್ ಪಕ್ಷ ಹಾಗೂ ಅದರ ಶಾಸಕರು ಯಾವ ರೀತಿ ಡ್ರಗ್ಸ್ ಮಾಫಿಯಾದ ಪರವಾಗಿದ್ದಾರೆ ಎಂಬುದನ್ನು ಅರಿಯಬಹುದು. ಡ್ರಗ್ಸ್ ಮಾತ್ರವಲ್ಲ, ಕಾಂಗ್ರೆಸ್ ಪಕ್ಷವೂ ನಿರ್ಮೂಲನೆ ಆಗಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಮಾದಕದ್ರವ್ಯ ಪ್ರಕರಣಗಳ ಬಗ್ಗೆ ಕಾಂಗ್ರೆಸ್ ಜಾಣ ಮೌನಕ್ಕೆ ಶರಣಾಗಿದೆ. ಬಂಧಿತ ನಟಿ ಸಂಜನಾಳೊಂದಿಗೆ ಕಾಂಗ್ರೆಸ್ ಶಾಸಕರೊಬ್ಬರು ಶ್ರೀಲಂಕಾಕ್ಕೆ ಪಾರ್ಟಿಗೆ ತೆರಳಿದ್ದು ಸತ್ಯವಲ್ಲವೆ? ಪ್ರತ್ಯಕ್ಷವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ಈ ಪಕ್ಷ ಮಾದಕದ್ರವ್ಯ ಜಾಲವನ್ನು ಬೆಂಬಲಿಸುತ್ತಿದೆಯೆ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಸರ್ಕಾರ ಡ್ರಗ್ಸ್ ವಿರುದ್ಧ ಕಠಿಣವಾದ ನಿರ್ಧಾರ ತೆಗೆದುಕೊಂಡು ಈ ಮಾಫಿಯಾ ಮಟ್ಟಹಾಕಲು ಮುಂದಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com