ಬೆಂಗಳೂರು: ಕೋವಿಡ್-19 ರಾಜ್ಯ ಮಟ್ಟದ ತಜ್ಞರ ಸಮಿತಿಗೆ ಆದೇಶ ನೀಡಿರುವ ಕರ್ನಾಟಕ ಹೈಕೋರ್ಟ್, ಖಾಸಗಿ ಆಸ್ಪತ್ರೆಗಳಲ್ಲಿ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಇರುವ ಕೋವಿಡ್ ರೋಗಿಗಳ ಸೌಲಭ್ಯದ ಬಗ್ಗೆ ವರದಿ ಸಲ್ಲಿಸುವಂತೆ ಆದೇಶ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ, ಒಂದು ವಾರದೊಳಗೆ ಸಮಿತಿ ವರದಿ ಸಲ್ಲಿಸುವಂತೆ ಹೇಳಿದೆ.
ಬೆಂಗಳೂರಿನ ನಿಮ್ಹಾನ್ಸ್ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳಿಗೆ, ಗುತ್ತಿಗೆ ನೌಕರರ ಕಾಯ್ದೆ ಅನ್ವಯ ಗುತ್ತಿಗೆ ಕಾರ್ಮಿಕರಿಗೆ ವೇತನ ನೀಡಲಾಗುತ್ತಿದೆಯೇ, ವೇತನ ವಿಲೇವಾರಿಗೆ ಅಧಿಕಾರಿಗಳನ್ನು ನೇಮಕಾತಿ ಮಾಡಲಾಗಿದೆಯೇ ಎಂದು ಅಫಿಡವಿಟ್ಟು ಸಲ್ಲಿಸುವಂತೆ ನ್ಯಾಯಪೀಠ ಆದೇಶ ನೀಡಿದೆ.
ಲಾಕ್ ಡೌನ್ ಸಮಯದಲ್ಲಿ ನಿಮ್ಹಾನ್ಸ್ ಕಾರ್ಮಿಕ ನೌಕರರಿಗೆ ವೇತನ ನೀಡಿಲ್ಲ ಎಂದು ವ್ಯಾಪಾರ ಒಕ್ಕೂಟ ಕೋರ್ಟ್ ಮೊರೆ ಹೋದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಆದೇಶ ನೀಡಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೂಡ ಸಿಬ್ಬಂದಿಗೆ ಸರಿಯಾದ ಸಮಯಕ್ಕೆ ವೇತನ ನೀಡುತ್ತಿಲ್ಲ ಮತ್ತು ಕೆಲವೊಮ್ಮೆ ವೇತನ ಕಡಿಮೆ ನೀಡಲಾಗುತ್ತದೆ. ಇದಕ್ಕೆ ಪ್ರತಿಯಾಗಿ ನಿಮ್ಹಾನ್ಸ್ ಪರ ವಕೀಲ ಗುತ್ತಿಗೆ ನೌಕರರಿಗೆ ವೇತನ ನೀಡಲಾಗಿದೆ ಎಂದಿದ್ದಾರೆ.
ಈ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಆದೇಶ ನೀಡಿದೆ.
Advertisement