ಅರಣ್ಯ ಇಲಾಖೆ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗ ಮೃತಪಟ್ಟರೆ ಪರಿಹಾರ ಹೊತ್ತ 30 ಲಕ್ಷ ರೂ.ಗೆ ಏರಿಕೆ: ಆನಂದ್ ಸಿಂಗ್
ಬೆಂಗಳೂರು: ಅರಣ್ಯ ಇಲಾಖೆಯಲ್ಲಿ ಕ್ಲಿಷ್ಟಕರ ಸನ್ನೆವೇಶಗಳಲ್ಲಿ ಕರ್ತವ್ಯ ನಿರ್ವಹಿಸುವಾಗ ಮರಣ ಹೊಂದಿದಲ್ಲಿ ಅವರಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು ರಾಜ್ಯ ಸರ್ಕಾರ 20 ರಿಂದ 30 ಲಕ್ಷ ರೂ. ಗಳಿಗೆ ಏರಿಕೆ ಮಾಡಿದೆ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಅವರು ಹೇಳಿದ್ದಾರೆ.
ಅಲ್ಲದೆ ಹುತಾತ್ಮರ ಕುಟುಂಬಗಳಿಗೆ ನೆರವಾಗಲು ಹುತಾತ್ಮರ ದಿನಾಚರಣೆ ಸಮಿತಿಯನ್ನು ರಚಿಸಿ ನಿಧಿ ಸಂಗ್ರಹಿಸಲಾಗಿದ್ದು, ಈವರೆಗೆ ಕ್ರೋಢೀಕರಣವಾಗಿರುವ ಒಟ್ಟು 20,64,842 ರೂ. ಮೊತ್ತವನ್ನು ಹುತಾತ್ಮರ ಅವಲಂಬಿತರ ಏಳಿಗೆಗಾಗಿ ಬಳಸಲಾಗುವುದು ಎಂದರು.
ಅರಣ್ಯ ಭವನದಲ್ಲಿಂದು ಏರ್ಪಡಿಸಲಾಗಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-೨೦೨೦ ಹಾಗೂ ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನು ಸಂರಕ್ಷಿಸಲು ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದ ಅವರು, ಅರಣ್ಯ ಉಳಿಸಿ ಬೆಳೆಸುವುದು, ಅರಣ್ಯ ಸಂರಕ್ಷಣೆ ಕೇವಲ ಅರಣ್ಯ ಇಲಾಖೆಯ ಜವಾಬ್ದಾರಿ ಮಾತ್ರವಲ್ಲ. ಅರಣ್ಯ ಸಂರಕ್ಷಣೆ ರಾಷ್ಟ್ರದ ಪ್ರತಿಯೊಬ್ಬ ನಾಗರೀಕರ ಕರ್ತವ್ಯ ಎಂದರು.
ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಮೂರು ಅಂಗಗಳು ಒಟ್ಟಾಗಿ ಕೆಲಸ ನಿರ್ವಹಿಸಿದಲ್ಲಿ ಸಾಮಾಜಿಕ ನ್ಯಾಯ ದೊರಕಿಸಲು ಸಾಧ್ಯ. ಆಗ ಮಾತ್ರ ಸಾಮಾನ್ಯ ಜನರಿಗೆ ನ್ಯಾಯ ದೊರಕುತ್ತದೆ ಎಂದು ಸಚಿವರು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ