
ಬೆಂಗಳೂರು: ಡ್ರಗ್ಸ್ ಪ್ರಕರಣಯಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಪ್ರಕರಣದಲ್ಲಿ ಕೆಲವರ ಬಣ್ಣ ಈಗ ಬಯಲಾಗುತ್ತಿದೆ. ಡ್ರಗ್ಸ್ ದಂಧೆ ವ್ಯಾಪಕಗೊಂಡಿದ್ದರೂ ಕಡಿವಾಣ ಹಾಕುವಲ್ಲಿ ಹಿಂದಿನ ಸರ್ಕಾರ ಕಣ್ಮುಚ್ಚಿ ಕುಳಿತಿತ್ತು. ದೇಶದ ಇತಿಹಾಸದಲ್ಲಿಯೇ ಯಾರೂ ಕೂಡ ಈ ರೀತಿ ಕ್ರಮ ಕೈಗೊಂಡಿರಲಿಲ್ಲ. ಸಿಸಿಬಿ ತನಿಖೆ ಮಾಡುತ್ತಿದ್ದು, ಎಲ್ಲರ ಬಣ್ಣ ಬಯಲಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಡ್ರಗ್ಸ್ ದಂಧೆಯಲ್ಲಿ ಪ್ರಭಾವಿಗಳು ಭಾಗಿಯಾಗಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸುತ್ತಿದ್ದೇವೆ. ದೇಶದ ಇತಿಹಾಸದಲ್ಲಿಯೇ ಆಳವಾದ ತನಿಖೆಗೆ ಇಳಿದಿದ್ದು, ಈಗಾಗಲೇ ಕೆಲವರ ಬಣ್ಣ ಬಯಲಾಗಿದೆ. ಇನ್ನೂ ಹಲವರ ಬಣ್ಣ ಬಯಲಾಗಲಿದೆ ಎಂದು ಹೇಳಿದ್ದಾರೆ.
ಪ್ರಸ್ತುದ ದಂಧೆ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆಯಿಂದ ಎಲ್ಲರ ಬಣ್ಣವೂ ಬಯಲಾಗಲಿದೆ. ಎಷ್ಟೇ ಪ್ರಭಾವಿಗಳಾಗಿದ್ದರೂ ಯಾರನ್ನೂ ರಕ್ಷಿಸುವ ಪ್ರಶ್ನೇಯೇ ಇಲ್ಲ. ಆರೋಪ ಸಾಬೀತಾಗುವ ಎಲ್ಲರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಲು ಪ್ರಯತ್ನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಅಲ್ಲದೆ, ಡ್ರಗ್ಸ್ ದಂಧೆಯ ಪ್ರಕರಣಗಳು ಕಳೆದ 10 ವರ್ಷಗಳಿಂದಲೂ ಆಗಾಗ್ಗೆ ಬೆಳಕಿಗೆ ಬರುತ್ತಿವೆ. ಆದರೆ, ಯಾವ ಸರ್ಕಾರಗಳೂ ಬಿಗಿ ಕ್ರಮಗಳನ್ನು ಕೈಗೊಳ್ಳದೆ ಕೈಕಟ್ಟಿ ಕುಳಿತಿದ್ದವು. ಸಮಾಜಕ್ಕೆ ಹಾನಿಯಾಗುವ ಯಾವುದನ್ನೂ ನಾವು ಸಹಿಸುವುದಿಲ್ಲ. ಹೀಗಾಗಿ ಸಮಗ್ರವಾಗಿ ತನಿಖೆ ನಡೆಸುತ್ತಿದ್ದೇವೆ. ಹೀಗಾಗಿ ಹಲವರ ಬಣ್ಣ ಬಯಲಾಗಲಿದೆ ಎಂದಿದ್ದಾರೆ.
Advertisement