60 ವರ್ಷ ದಾಟಿದವರಿಗೆ ಇನ್ನು ಮುಂದೆ ಪಿಂಚಣಿ ಸುಲಭ-ಆರ್. ಅಶೋಕ್

ಇನ್ನು ಮುಂದೆ 60 ವರ್ಷ ಮೀರಿದ ಎಲ್ಲರಿಗೂ ವೃದ್ಧಾಪ್ಯ ಪಿಂಚಣಿ ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಆರ್. ಅಶೋಕ್
ಆರ್. ಅಶೋಕ್
Updated on: 

ತುಮಕೂರು: ಇನ್ನು ಮುಂದೆ 60 ವರ್ಷ ಮೀರಿದ ಎಲ್ಲರಿಗೂ ವೃದ್ಧಾಪ್ಯ ಪಿಂಚಣಿ ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಪಿಂಚಣಿಗಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಇನ್ನು ಮುಂದೆ  60 ವರ್ಷ ಮೀರಿದವರು ಅರ್ಜಿ ಸಲ್ಲಿಸದೇ ಇದ್ದರೂ ಪಿಂಚಣಿ ಪಡೆಯುವ ಸೌಲಭ್ಯ ಕಲ್ಪಿಸಲಾಗುವುದು ಎಂದರು.

ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 60 ವರ್ಷ ವಯೋಮಿತಿ ಮೀರಿದವರ ದಾಖಲೆಗಳು ನಮ್ಮಲ್ಲಿಯೇ ಲಭ್ಯವಿದ್ದು, 60 ವರ್ಷ ಮೀರಿದವರು ಪಿಂಚಣಿ ಪಡೆಯಲು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲಾಗುವುದು ಎಂದು ಹೇಳಿದರು.

 ಈ ದಿಸೆಯಲ್ಲಿ  ಉಡುಪಿ ಹಾಗೂ ಬಳ್ಳಾರಿಯಲ್ಲಿ ಈಗಾಗಲೇ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಅಳವಡಿಸಲಾಗಿದ್ದು, 10 ಸಾವಿರ ಮಂದಿಗೆ ಈ ರೀತಿ ಪಿಂಚಣಿ ನೀಡಲಾಗಿದೆ ಎಂದರು. 

ಇದೀಗ ತುಮಕೂರು ಜಿಲ್ಲೆಯಲ್ಲಿಯೂ ಸಹ ಈ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗುವುದು. ಮುಂದಿನ ಎರಡು ತಿಂಗಳೊಳಗೆ ಈ ಯೋಜನೆಯನ್ನು ರಾಜ್ಯವ್ಯಾಪಿ ಅನುಷ್ಠಾನಕ್ಕೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಇಂತಹ ಕ್ರಮಗಳಿಂದ ಪಿಂಚಣಿ ವ್ಯವಸ್ಥೆಯಲ್ಲಿ ಆಗುತ್ತಿರುವ ಗೊಂದಲಗಳನ್ನು ಬಗೆಹರಿಸಿಕೊಳ್ಳಬಹುದಾಗಿದ್ದು, ತ್ವರಿತವಾಗಿ ಸರ್ಕಾರಿ ಸೌಲಭ್ಯ ದೊರಕಿಸಿಕೊಡಲು ಸಹಕಾರಿಯಾಗಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com