ಜ್ವರದಿಂದ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆಗೊಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಜ್ವರದಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
Updated on: 

ಬೆಂಗಳೂರು: ಜ್ವರದಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 

ಕೊರೋನಾ ಲಕ್ಷಣಗಳು ಹಾಗೂ ಅತೀವ್ರ ಜ್ವರದಿಂದ ಬಳಲುತ್ತಿದ್ದ ಡಿಕೆ.ಶಿವಕುಮಾರ್ ಅವರನ್ನು ಸೆಪ್ಟೆಂಬರ್ 2ರಂದು ಜಯನಗರದ ಅಪೊಲೋ ಸ್ಟೆಷಾಲಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಜ್ವರದಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದು, ಇದೀಗ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಮಾಹಿತಿ ನೀಡಿದ್ದಾರೆ. 

ಈ ಹಿಂದೆ ಡಿಕೆ.ಶಿವಕುಮಾರ್ ಅವರಿಗೆ ಕೊರೋನಾ ದೃಢಪಟ್ಟಿತ್ತು. ಚಿಕಿತ್ಸೆ ಪಡೆದಿದ್ದ ಡಿಕೆಶಿಯವರು ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿದ್ದರು. ಇದಾದ ಕೆಲವೇ ದಿನಗಳ ಬಳಿಕ ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮತ್ತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com