ಕನ್ನಡಕ್ಕೆ ಹಿಂದಿಯಂತೆ ಸ್ಥಾನಮಾನ ತರಲು ಸಾಂವಿಧಾನಿಕ ತಿದ್ದುಪಡಿ ಅಗತ್ಯ: ಎಚ್ ಡಿ ಕುಮಾರಸ್ವಾಮಿ

ಸಂವಿಧಾನವನ್ನು ಬದಲಿಸುವ ಮಾತನಾಡುವ ಬಿಜೆಪಿ ನಾಯಕರು ಕನ್ನಡ ಮತ್ತು ಇತರ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲು ಪ್ರಯತ್ನಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರವನ್ನು ಆಗ್ರಹಿಸಿದ್ದಾರೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಸಂವಿಧಾನವನ್ನು ಬದಲಿಸುವ ಮಾತನಾಡುವ ಬಿಜೆಪಿ ನಾಯಕರು ಕನ್ನಡ ಮತ್ತು ಇತರ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲು ಪ್ರಯತ್ನಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರವನ್ನು ಆಗ್ರಹಿಸಿದ್ದಾರೆ.

ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಅಂಶಗಳಿವೆ. ಇದೇ ನೆಪದಲ್ಲಿ ಹಿಂದಿ ಹೇರುವ ಪ್ರಯತ್ನ ಕೇಂದ್ರ ಸರ್ಕಾರಗಳಿಂದ ನಿರಂತರವಾಗಿ ನಡೆದಿದೆ ಎಂದು ಟ್ವೀಟ್ ಮೂಲಕ ಆರೋಪಿಸಿದ್ದಾರೆ.

ಕನ್ನಡವೂ ಸೇರಿ ಪ್ರಾದೇಶಿಕ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿರುವುದು ಭಾಷಾ ತಿರಸ್ಕಾರದ ಸಂಕೇತವಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಇತರ ಭಾಷೆಗಳಿಗೆ ಹಿಂದಿಯಷ್ಟು ಸ್ಥಾನಮಾನ ನೀಡಲು ನಿರಾಕರಿಸುತ್ತಿರುವ ಕೇಂದ್ರ ಸರ್ಕಾರ ಮತ್ತು ಅದರ ನೇತೃತ್ವ ವಹಿಸಿರುವ ಬಿಜೆಪಿ, ಹಿಂದಿಯೇತರ ರಾಜ್ಯಗಳ, ಹಿಂದಿಯೇತರ ಭಾಷಿಕರ ಸಂಸದರನ್ನೂ ಒಳಗೊಂಡು ಸರ್ಕಾರ ರಚಿಸಿದೆ ಎಂಬುದು ನೆನಪಿರಲಿ.ಎಲ್ಲ ಅಧಿಕೃತ ಭಾಷೆಗಳನ್ನು ಆಡಳಿತದಲ್ಲಿ ಜಾರಿಗೆ ತಂದು ಅವರೆಲ್ಲರ ಋಣ ತೀರಿಸುವುದು ಬಿಜೆಪಿಯ ಕರ್ತವ್ಯ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಅಧಿಸೂಚನೆ, ಪ್ರಕಟಣೆಗಳು ಇತರೆ ಅಧಿಕೃತ ಭಾಷೆಗಳಲ್ಲಿಯೂ ಇರಬೇಕು ಎಂದು ಸುಪ್ರೀಂ ಕೋರ್ಟ್ ಇತ್ತೀಚಿಗೆ ಪ್ರಕರಣವೊಂದರ ವಿಚಾರಣೆ ವೇಳೆ ಕೇಂದ್ರಕ್ಕೆ ಸೂಚನೆ ನೀಡಿದೆ. ಅಲ್ಲದೇ, ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ, ಎಲ್ಲ ಭಾಷೆಗಳೂ ಸರಿಸಮಾನ ಎಂಬುದನ್ನು ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕು ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com