ಮೋದಿ ರಾಜ್ಯದ ಪಾಲಿನ ಜಿಎಸ್‌ಟಿ ಹಣವನ್ನು ಬೇರೆ ಬೇರೆ ರೂಪದಲ್ಲಿ ನೀಡಿದ್ದಾರೆ: ಎಸ್ ಎಲ್ ಭೈರಪ್ಪ

ರಾಜ್ಯದ ಪಾಲಿನ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಹಣವನ್ನು ಪ್ರಧಾನಿ ನರೇಂದ್ರ ಮೋದಿ ಬೇರೆ ಬೇರೆ ರೂಪದಲ್ಲಿ ಕೊಟ್ಟಿದ್ದಾರೆ ಎಂದು ಹಿರಿಯ ಸಾಹಿತಿ. ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಡಾ.ಎಸ್. ಎಲ್ ಭೈರಪ್ಪ ಹೇಳಿದ್ದಾರೆ.
ಎಸ್ ಎಲ್ ಭೈರಪ್ಪ
ಎಸ್ ಎಲ್ ಭೈರಪ್ಪ

ಮೈಸೂರು: ರಾಜ್ಯದ ಪಾಲಿನ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಹಣವನ್ನು ಪ್ರಧಾನಿ ನರೇಂದ್ರ ಮೋದಿ ಬೇರೆ ಬೇರೆ ರೂಪದಲ್ಲಿ ಕೊಟ್ಟಿದ್ದಾರೆ ಎಂದು ಹಿರಿಯ ಸಾಹಿತಿ. ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಡಾ.ಎಸ್. ಎಲ್ ಭೈರಪ್ಪ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಜಿ.ಎಸ್.ಟಿ. ಹಣ ಕೊಟ್ಟಿಲ್ಲ ಅಂತ ಯಾಕೆ ದೂಷಿಸಬೇಕು. ಇಂತಹ ಆರೋಪ ಸರಿಯಿಲ್ಲ ಎಂದು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನರೇಂದ್ರ ಮೋದಿ ಅವರ 70ನೇ ವರ್ಷದ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಗಿದೆ. ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದಿಂದ ಏರ್ಪಡಿಸಿದ್ದ ಸಮಾರಂಭವನ್ನು ಡಾ. ಎಸ್ ಎಲ್ ಭೈರಪ್ಪ ಉದ್ಘಾಟಿಸಿ, ನಂತರ ಸುದ್ದಿಗಾರರ ಜತೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ 6 ವರ್ಷದ ಆಡಳಿತ ತೃಪ್ತಿ ತಂದಿದೆ ಎಂದರು.

ವಿಶ್ವವನ್ನೇ ತಲ್ಲಣಗೊಳಿಸಿದ ಕೊರೋನಾ ಸೋಂಕು ನಿಭಾಯಿಸುವಲ್ಲಿ ಮೋದಿ ಯಶಸ್ವಿಯಾಗಿದ್ದಾರೆ ಎಂದು ಭೈರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com