ಶೇ.50ರಷ್ಟು ಬೆಡ್ ಹಸ್ತಾಂತರಿಸದ 36 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಟಿ ನೋಟಿಸ್

ಬೆಂಗಳೂರಿನ ಕೊರೋನಾ ಸೋಂಕಿತರ ಚಿಕಿತ್ಸೆಗೆ ಸಹಕಾರ ನೀಡದ ಮತ್ತು ಸರ್ಕಾರದ ಆದೇಶದಂತೆ ಆಸ್ಪತ್ರೆಯ ಒಟ್ಟು ಹಾಸಿಗೆಯಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರದ ವಶಕ್ಕೆ ನೀಡದ ನಗರದ 36 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಆಯುಕ್ತ. ಎನ್.ಮಂಜುನಾಥ್ ಪ್ರಸಾದ್ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೆಂಗಳೂರಿನ ಕೊರೋನಾ ಸೋಂಕಿತರ ಚಿಕಿತ್ಸೆಗೆ ಸಹಕಾರ ನೀಡದ ಮತ್ತು ಸರ್ಕಾರದ ಆದೇಶದಂತೆ ಆಸ್ಪತ್ರೆಯ ಒಟ್ಟು ಹಾಸಿಗೆಯಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರದ ವಶಕ್ಕೆ ನೀಡದ ನಗರದ 36 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಆಯುಕ್ತ. ಎನ್.ಮಂಜುನಾಥ್ ಪ್ರಸಾದ್ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. 

ಜೊತೆಗೆ ಮುಂದಿನ 48 ಗಂಟೆಗಳ ಒಳಗಾಗಿ ಸರ್ಕಾರದ ಆದೇಶದಂತೆ ಶೇ.50ರಷ್ಟು ಹಾಸಿಗೆಗಳನ್ನು ಬಿಟ್ಟು ಕೊಡಬೇಕು ಹಾಗೂ 24 ಗಂಟೆಗಳ ಒಳಗೆ ಪಾಲಿಕೆಯ ಶೋಕಾಸ್ ನೋಟಿಸ್'ಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳಿಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ. 

ಸೋಟಿಸ್'ಗೆ ಉತ್ತರ ನೀಡದ ಹಾಗೂ ಸರ್ಕಾರದ ನಿರ್ದೇಶನದಂತೆ ಶೇ.50ರಷ್ಟು ಹಾಸಿಗೆಗಳನ್ನು ಬಿಟ್ಟುಕೊಡದೆ ಇದ್ದಲ್ಲಿ, ಆಶ್ಪತ್ರೆಗಳ ಪರವಾನಗಿಯನ್ನು ರದ್ದು ಮಾಡುವುದರ ಜೊತೆಗೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸೋಂಕಿತರ ಚಿಕಿತ್ಸೆಗೆ ಆನ್'ಲೈನ್ ಪೋರ್ಟ್'ನಲ್ಲಿ ಹಾಸಿಗೆ ಬ್ಲಾಕ್ ಮಾಡಿದರೂ, ಖಾಸಗಿ ಆಸ್ಪತ್ರೆಗೆ ದಾಖಲಿಸುವ ವೇಳೆ ಆಸ್ಪತ್ರೆಯಲ್ಲಿ ಹಾಸಿಗೆಗಳು ಖಾಲಿ ಇಲ್ಲ ಎಂದು ಹೇಳಿ ಚಿಕಿತ್ಸೆಗೆ ನಿರಾಕರಿಸಲಾಗುತ್ತಿತ್ತು. ಅಲ್ಲದೆ ಎಸ್ಎಎಸ್'ಟಿ ಪೋರ್ಟ್ ನಲ್ಲಿ ವಿವರವಾದ ಮಾಹಿತಿ ನೀಡಿಲ್ಲ ಎಂದು ನೋಟಿಸ್ ನೀಡಲಾಗಿದೆ. 

ಈಗಾಗಲೇ ಹಲವು ಬಾರಿ ಬಿಬಿಎಂಪಿ ಆಯುಕ್ತರು ಮತ್ತು ಅಧಿಕಾರಿಗಳು ಸರ್ಕಾರಿ ಆದೇಶದಂತೆ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರದ ವಶಕ್ಕೆ ನೀಡುವಂತೆ ಸೂಚನೆ ನೀಡಲಾಗಿತ್ತು. ಹಲವು ಬಾರಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿ ಬಿಬಿಎಂಪಿಯಿಂದ ಸಾಧ್ಯವಾಗುವ ಎಲ್ಲಾ ಸಹಕಾರ ನೀಡಲಾಗುವುದು. ಶೇ.50ರಷ್ಟು ಹಾಸಿಗೆ ನೀಡುವಂತೆ ಸೂಚಿಸಲಾಗಿತ್ತು. ಆದರೆ, ಕೆಲವು ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆ ನೀಡಿರಲಿಲ್ಲ.ಹೀಗಾಗಿ ಬಿಬಿಎಂಪಿ ಆಯುಕ್ತರು ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com