ನರೇಂದ್ರ ಮೋದಿ ಆಡಳಿತದಲ್ಲಿ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರಿಕೆ: ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ನರೇಂದ್ರ ಮೋದಿ, ಸಿದ್ದರಾಮಯ್ಯ
ನರೇಂದ್ರ ಮೋದಿ, ಸಿದ್ದರಾಮಯ್ಯ
Updated on: 

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕಳೆದ ಆರು ತಿಂಗಳಲ್ಲಿ ಸಂಬಳ ಪಡೆಯುವ ಎರಡು ಕೋಟಿ ಉದ್ಯೋಗಗಳು ಮತ್ತು ಒಟ್ಟು 12 ಕೋಟಿ ಉದ್ಯೋಗಗಳು ನಷ್ಟವಾಗಿವೆ. ಉದ್ಯೋಗ ಸೃಷ್ಟಿಗೆ ನಿಮ್ಮ ಯೋಚನೆ ಮತ್ತು ಯೋಜನೆ ಏನು? ಎಂದು ದೇಶದ ಯುವ ಜನತೆ ಕೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಕಳೆದ 45 ವರ್ಷಗಳಲ್ಲಿ ಅತ್ಯಧಿಕ ನಿರುದ್ಯೋಗಕ್ಕೆ ಕಾರಣಕರ್ತರಾಗಿದ್ದಾರೆ. ಇದರ ವಿರುದ್ಧ ಸಿಡಿದೆದ್ದಿರುವ ದೇಶದ ಯುವಜನತೆ ಆರಂಭಿಸಿರುವ ಅಭಿಯಾನವನ್ನು ಬೆಂಬಲಿಸುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com