ರಾಜ್ಯದಲ್ಲಿ ಇಂದು ಕೊರೋನಾಗೆ 179 ಸಾವು, ಬೆಂಗಳೂರಿನಲ್ಲಿ 3623 ಸೇರಿ 8626 ಮಂದಿಗೆ ಪಾಸಿಟೀವ್

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರದಂದು 8626  ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷವನ್ನು ದಾಟಿದೆ.
ಸಾಂದದರ್ಭಿಕ ಚಿತ್ರ
ಸಾಂದದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರದಂದು 8626  ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷವನ್ನು ದಾಟಿದೆ.

ರಾಜ್ಯದಲ್ಲಿ ಇಂದು 179 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,808ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ 3623 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,87,705ಕ್ಕೆ ಏರಿಕೆಯಾಗಿದೆ. ಇಂದು 10949 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,94026 ಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com