ಬೆಂಗಳೂರು ಗಲಭೆ ಪ್ರಕರಣ: ಕೊರೋನಾ ಸೋಂಕು ಕಾರಣ ನೀಡಿ ವಿಚಾರಣೆಗೆ ಮಾಜಿ ಮೇಯರ್ ಸಂಪತ್ ರಾಜ್ ಗೈರು

ಬೆಂಗಳೂರು ಗಲಭೆ ಪ್ರಕರಣ ಸಂಬಂಧ ವಿಚಾರಣೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಎರಡನೇ ಬಾರಿಗೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಸಂಪತ್ ರಾಜ್ ಅವರು ಗೈರು ಹಾಜರಾಗಿದ್ದಾರೆಂದು ತಿಳಿದುಬಂದಿದೆ. 
ಸಂಪತ್ ರಾಜ್
ಸಂಪತ್ ರಾಜ್

ಬೆಂಗಳೂರು: ಬೆಂಗಳೂರು ಗಲಭೆ ಪ್ರಕರಣ ಸಂಬಂಧ ವಿಚಾರಣೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಎರಡನೇ ಬಾರಿಗೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಸಂಪತ್ ರಾಜ್ ಅವರು ಗೈರು ಹಾಜರಾಗಿದ್ದಾರೆಂದು ತಿಳಿದುಬಂದಿದೆ. 

ತೀವ್ರ ಸಂಚಲನ ಸೃಷ್ಟಿಸಿದ್ದ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈ ನಡುವೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ ಎಂದು ಹೇಳಲಾಗುತ್ತಿದ್ದು, ಇದರಂತೆ ವಿಚಾರಣೆಗೆ ಹಾಜರಾಗುವಂತೆ ಶುಕ್ರವಾರವಷ್ಟೇ ಸಂಪತ್ ರಾಜ್ ಅವರಿಗೆ ಎರಡನೇ ಬಾರಿಗೆ ನೋಟಿಸ್ ಜಾರಿ ಮಾಡಿದ್ದರು. 

ಆದರೆ, ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಮ್ಮ ವಕೀಲರಿಂದ ಸಂಪತ್ ಕುಮಾರ್ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂದು ತಿಳಿದುಬಂದಿದೆ. 

ಪ್ರಕರಣ ಸಂಬಂಧ ಸಂಪತ್ ರಾಜ್ ಅವರು ಆರೋಪಿಗಳೊಂದಿಗೆ ದೂರವಾಣಿ ಕರೆಗಳೊಂದಿಗೆ ಸಂಪರ್ಕದಲ್ಲಿದ್ದರು ಎಂದು ಹೇಳಲಾಗುತ್ತಿದೆ. ಈ ಕುರಿತು ಬಂಧನಕ್ಕೊಳಗಾಗಿರುವ ಆರೋಪಿ ಅರುಣ್ ಕುಮಾರ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆಂದು ಹೇಳಲಾಗುತ್ತಿದೆ. ಸಂಪತ್ ರಾಜ್ ಅವರು ಕರೆ ಮಾಡುವಾಗ ತನ್ನ ಫೋನ್ ಬಳಕೆ ಮಾಡುತ್ತಿದ್ದ ಎಂದು ಹೇಳಿಕೊಂಡಿದ್ದಾನೆಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com