ವಿಜಯನಗರ ಜಿಲ್ಲೆ ರಚನೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆ

ವಿಜಯನಗರ ಜಿಲ್ಲೆ ರಚಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆಯ ವಿಷಯವನ್ನು ಮಂಡಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯ ಸರ್ಕಾರದ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯ ಸರ್ಕಾರದ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್
Updated on

ಬೆಂಗಳೂರು: ವಿಜಯನಗರ ಜಿಲ್ಲೆ ರಚಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆಯ ವಿಷಯವನ್ನು ಮಂಡಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಪ್ರಸ್ತುತ ಬಳ್ಳಾರಿ ಜಿಲ್ಲೆಯು ತುಂಬಾ ವಿಸ್ತಾರವಾಗಿದ್ದು,ಒಟ್ಟು 11 ಕಂದಾಯ ತಾಲ್ಲೂಕುಗಳನ್ನು ಹಾಗೂ 3 ಕಂದಾಯ ಉಪ ವಿಭಾಗಗಳನ್ನು ಒಳಗೊಂಡಿರುವ ಅತಿ ದೊಡ್ಡ ಜಿಲ್ಲೆ ಎನಿಸಿಕೊಂಡಿದೆ.

ಜಿಲ್ಲೆಯ ಕೆಲವೊಂದು ಪ್ರದೇಶಗಳು ಜಿಲ್ಲಾ ಕೇಂದ್ರ ಸ್ಥಾನದಿಂದ 200 ಕಿ.ಮೀ. ಅಂತರದಲ್ಲಿರುವುದರಿಂದ ಈ ಭಾಗದ ರೈತರಿಗೆ, ಬಡವರಿಗೆ,ಕೂಲಿ ಕಾರ್ಮಿಕರಿಗೆ ಹಾಗೂ ಜನಸಾಮಾನ್ಯರೆಲ್ಲರಿಗೂ ತಮ್ಮ ಕೆಲಸ ಕಾರ್ಯಗಳಿಗೆ ಜಿಲ್ಲಾ ಕೇಂದ್ರ ತಲುಪುವುದು ತುಂಬಾ ದುಸ್ತರವಾಗಿದೆ.

 ಸಾರ್ವಜನಿಕ ಹಾಗೂ ಆಡಳಿತ ಹಿತದೃಷ್ಟಿಯಿಂದ ಪ್ರಸ್ತುತ ಬಳ್ಳಾರಿ ಜಿಲ್ಲೆಯ 11 ತಾಲ್ಲೂಕುಗಳಲ್ಲಿ ಮೂಲ ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಸಂಡೂರು ಮತ್ತು ಕೂಡ್ಲಿಗಿ ಈ ತಾಲೂಕುಗಳನ್ನು ಹೊರತುಪಡಿಸಿ ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹಡಗಲಿ ಮತ್ತು ಹರಪನಹಳ್ಳಿ ಸೇರಿಸಿ ಹೊಸಪೇಟೆ ಪಟ್ಟಣವನ್ನು ಕೇಂದ್ರವನ್ನಾಗಿಸಿ ನೂತನ ವಿಜಯನಗರ ಜಿಲ್ಲೆಯನ್ನು ರಚಿಸುವುದು ಅಗತ್ಯವಾಗಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ರಚನೆಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com