ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಶನಿವಾರ ಬರೋಬ್ಬರಿ 8364 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,11,346ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 114 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7922ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 33 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 114 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3733 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,91,438ಕ್ಕೆ ಏರಿಕೆಯಾಗಿದೆ.
ಇಂದು 10815 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 4,04841ಕ್ಕೆ ಏರಿಕೆಯಾಗಿದೆ. 98,564 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 822 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
Advertisement