ನಿರೂಪಕ ಅಕುಲ್ ಬಾಲಾಜಿ ಸೇರಿ ಮೂವರು ಸಿಸಿಬಿ ಎದುರು ಹಾಜರು

ಚಂದನವನಕ್ಕೆ ಮಾದಕ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಆರ್ ವಿ .ದೇವರಾಜ್ ಅವರ ಪುತ್ರ ಯುವರಾಜ್, ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಸಂತೋಷ್‌ ಆರ್ಯನ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿ ಸಿಸಿಬಿ ಕಚೇರಿ ಬಂದು ವಿಚಾರಣೆಗೆ ಹಾಜರಾಗಿದ್ದಾರೆ. 
ನಿರೂಪಕ ಅಕುಲ್ ಬಾಲಾಜಿ
ನಿರೂಪಕ ಅಕುಲ್ ಬಾಲಾಜಿ
Updated on

ಬೆಂಗಳೂರು: ಚಂದನವನಕ್ಕೆ ಮಾದಕ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಆರ್ ವಿ .ದೇವರಾಜ್ ಅವರ ಪುತ್ರ ಯುವರಾಜ್, ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಸಂತೋಷ್‌ ಆರ್ಯನ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿ ಸಿಸಿಬಿ ಕಚೇರಿ ಬಂದು ವಿಚಾರಣೆಗೆ ಹಾಜರಾಗಿದ್ದಾರೆ. 

ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಶುಕ್ರವಾರ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಅವರು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಇಂದು ಬೆಳಗ್ಗೆ ಹಾಜರಾಗಿದ್ದಾರೆ.

ಸಿಸಿಬಿ ಕಚೇರಿ ಬಳಿ ಅಕುಲ್ ಬಾಲಾಜಿ ಸುದ್ದಿಗಾರರೊಂದಿಗೆ ಮಾತನಾಡಿ, ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ನೋಟಿಸ್ ಬಂದಿದ್ದರಿಂದ ವಿಚಾರಣೆ ಹಾಜರಾಗುತ್ತಿದ್ದೇನೆ. ಇದೊಂದು ಉತ್ತಮ ಕೆಲಸ. ಸಿಸಿಬಿ ಪೊಲೀಸರಿಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ಅವರು ತಿಳಿಸಿದರು.

ಪ್ರತೀಕ್ ಶೆಟ್ಟಿ ಯಾರೂ ಎಂಬುದು ತಮಗೆ ಗೊತ್ತಿಲ್ಲ. ಆದರೆ, ವೈಭವ್ ಜೈನ್ ಅವರೊಂದಿಗೆ ಜಸ್ಟ್ ಹಾಯ್, ಬಾಯ್ ಪರಿಚಯವಿದೆ ಅಷ್ಟೇ. ವಿಚಾರಣೆ ವೇಳೆ ತನಿಖಾಧಿಕಾರಿಗಳು ಕೇಳುವ ಪ್ರಶ್ನೆಗಳಿಗೆ ತಾವೂ ನಿಖರವಾಗಿ ಉತ್ತರಿಸುವುದಾಗಿ ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com