ಚರ್ಚ್ ಫಾದರ್ ನಿಂದ ಲೈಂಗಿಕ ಕಿರುಕುಳ ಆರೋಪ: ಪೊಲೀಸ್ ಆಯುಕ್ತರ ಕಚೇರಿಯಲ್ಲೇ ಮಹಿಳೆ ಆತ್ಮಹತ್ಯೆಗೆ ಯತ್ನ

ಚರ್ಚ್ ಫಾದರ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕಲಬುರಗಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲೇ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. 
ಚರ್ಚ್ ಫಾದರ್ ನಿಂದ ಲೈಂಗಿಕ ಕಿರುಕುಳ ಆರೋಪ: ಪೊಲೀಸ್ ಆಯುಕ್ತರ ಕಚೇರಿಯಲ್ಲೇ ಮಹಿಳೆ ಆತ್ಮಹತ್ಯೆಗೆ ಯತ್ನ
Updated on

ಕಲಬುರಗಿ: ಚರ್ಚ್ ಫಾದರ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕಲಬುರಗಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲೇ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಆಶಾ ಮೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಕಲಬುರಗಿ ನಗರದ ಸೆಂಟ್ ಮೇರಿ ಕ್ಯಾಥಡ್ರಾಲ್ ಚರ್ಚ್‌ ನ ಫಾದರ್ ಕ್ಲೀವನ್‌ ಅವರು ತನಗೆ ಲೈಗಿಂಕ ಕಿರುಕುಳ ನೀಡಿದ್ದಾರೆ ಎಂದು ಆಶಾ ಮೇರಿ ಆರೋಪಿಸಿದ್ದಾರೆ. ಕೊರೊನಾ ಲಾಕ್ ಡೌನ್ ವೇಳೆಯಲ್ಲಿ ತನ್ನ ಸ್ನೇಹಿತೆ ಮೇರಿ ಬದಲಾಗಿ ಆಶಾ, ಚರ್ಚ್ ನ ಫಾದರ್ ಗಳಿಗಾಗಿ ಅಡುಗೆ ಮಾಡುತ್ತಿದ್ದರು. ಆ ವೇಳೆ ಫಾದರ್ ಕ್ಲೀವನ್‌ ಅವರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಸೈಬರ್ ಕ್ರೈಂ ಠಾಣೆಗೆ ವಿಚಾರಣೆಗೆ ಆಗಮಿಸಿದ ವೇಳೆ ಆಶಾ ಮೇರಿ, ತನಗೆ ನ್ಯಾಯ ದೊರಕುತ್ತಿಲ್ಲ ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಸಂತ್ರಸ್ತ ಮಹಿಳೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com