ಆರ್‌ಟಿಐ ಅಡಿಯಲ್ಲಿ ಯಾವುದೇ ಮಾಹಿತಿಯನ್ನು ಯಾರಿಗೂ ನೀಡಬೇಡಿ: ಅಧಿಕಾರಿಗಳಿಗೆ ಶಶಿಕಲಾ ಪತ್ರ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ಅವರು ತಮ್ಮ ಬಿಡುಗಡೆ ಕುರಿತಂತೆ ಯಾರಿಗೂ ಯಾವುದೇ ರೀತಿಯ ಮಾಹಿತಿ ನೀಡಬಾರದು ಎಂದು ತಮ್ಮ ವಕೀಲರ ಮೂಲಕ ಜೈಲಿನ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. 
ಶಶಿಕಲಾ
ಶಶಿಕಲಾ
Updated on

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ಅವರು ತಮ್ಮ ಬಿಡುಗಡೆ ಕುರಿತಂತೆ ಯಾರಿಗೂ ಯಾವುದೇ ರೀತಿಯ ಮಾಹಿತಿ ನೀಡಬಾರದು ಎಂದು ತಮ್ಮ ವಕೀಲರ ಮೂಲಕ ಜೈಲಿನ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. 

2017ರಿಂದ ಸೆರೆವಾಸ ಅನುಭವಿಸುತ್ತಿರುವ ಶಶಿಕಲಾ ಅವರು ಮುಂದಿನ ಜನವರಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಅವರು ಬಿಡುಗಡೆ ಕುರಿತು ಈಗಾಗಲೇ ಹಲವರು ಮಾಹಿತಿ ಹಕ್ಕಿನ ಅಡಿ ಮಾಹಿತಿ ಪಡೆಯುವ ಸಾಧ್ಯತೆ ಇದೆ. 

ಈ ಹಿನ್ನೆಲೆ ಯಾವುದೇ ಕಾರಣಕ್ಕೂ ಶಿಕ್ಷಣ ಪೂರ್ಣಗೊಳ್ಳುವ ಅವಧಿ ದಿನ ಹಾಗೂ ನನಗೆ ಸಂಬಂಧಿಸಿದ ಇತರೆ ಯಾವ ಮಾಹಿತಿಯನ್ನು ಯಾರಿಗೂ ಕೂಡ ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಇದು ತಮ್ಮ ಖಾಸಗಿ ಮಾಹಿತಿ ಹಕ್ಕು ಆಗಿದೆ ಎಂದು. ರಾಜಕೀಯ ವಿರೋಧಿಗಳು ಷಡ್ಯಂತ್ರಕ್ಕಾಗಿ  ಮಾಹಿತಿ ಪಡೆದು, ಅದರಿಂದ ಪ್ರಚಾರ ಪಡೆಯುವ ಸಾಧ್ಯತೆಗಳಿವೆ ಎಂದೂ ಕೂಡ ಅವರು ಪತ್ರದಲ್ಲಿ ತಿಳಿಸಿದ್ದಾರೆಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com