ಪಂಚಾಯತ್ ರಾಜ್ ಕಾಯ್ದೆ ತಿದ್ದುಪಡಿ ಅಂಗೀಕಾರ: ಸದಸ್ಯರ ಮೀಸಲು ಅವಧಿ 5 ವರ್ಷಕ್ಕೆ ಇಳಿಕೆ

ಗ್ರಾಮಪಂಚಾಯಿತಿ,ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಸದಸ್ಯರ ಮೀಸಲಾತಿ ಅವಧಿಯನ್ನು 10.ವರ್ಷಗಳಿಂದ 5 ವರ್ಷಕ್ಕೆ ಬದಲಾಯಿಸುವ ಕರ್ನಾಟಕ ಗ್ರಾಮ್ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು.
ವಿಧಾನಸೌಧ
ವಿಧಾನಸೌಧ
Updated on: 

ಬೆಂಗಳೂರು:ಕರ್ನಾಟಕ ಗ್ರಾಮ್ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು.

ಗ್ರಾಮಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಸದಸ್ಯರ ಮೀಸಲಾತಿ ಅವಧಿಯನ್ನು 10.ವರ್ಷಗಳಿಂದ 5 ವರ್ಷಕ್ಕೆ ಬದಲಾಯಿಸುವ ತಿದ್ದುಪಡಿಯ ಅಗತ್ಯದ ಬಗ್ಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಪ್ರಸ್ತಾಪಿಸಿದರು.

ಈಗಾಗಲೇ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೊಳಿಸಲಾಗಿದ್ದು ಅದಕ್ಕೆ ಸದನದ ಒಪ್ಪಿಗೆ ಪಡೆದು ಕಾನೂನು ರೂಪ ನೀಡಲು ಅನುಮತಿ ಪಡೆಯಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com