ಸ್ಯಾಂಡಲ್'ವುಡ್ ಡ್ರಗ್ಸ್ ಪ್ರಕರಣ: ರಾಗಿಣಿ, ಸಂಜನಾ ಸೇರಿ ಐವರು ಆರೋಪಿಗಳ ವಿಚಾರಣೆಗೆ ಇಡಿಗೆ ಅನುಮತಿ

ಸ್ಯಾಂಡಲ್'ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಸೇರಿದಂತೆ ಬಂಧನಕ್ಕೊಳಗಾಗಿರುವ ಐವರು ಆರೋಪಿಗಳ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಸ್ಯಾಂಡಲ್'ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಸೇರಿದಂತೆ ಬಂಧನಕ್ಕೊಳಗಾಗಿರುವ ಐವರು ಆರೋಪಿಗಳ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡಿದೆ. 

ನಾಳೆಯಿಂದ ಜೈಲಿನಲ್ಲಿಯೇ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ. 

ಡ್ರಗ್ಸ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದ ಹಿನ್ನೆಲೆ ಇಡಿ ಪ್ರಕರಣ ದಾಖಲಿಸಿಕೊಂಡಿತ್ತು. ಡ್ರಗ್ಸ್ ಪ್ರಕರಣದಲ್ಲಿ ಇಬ್ಬರೂ ನಟಿಯರನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಐದು ದಿನಗಳ ಕಾಲ ಇಡಿ ಅಧಿಕಾರಿಗಳು ಜೈಲಿನಲ್ಲಿ ವಿಚಾರಣೆಗೆ ಕೋರ್ಟ್ ಅನುಮತಿ ನೀಡಿದೆ. 

ನಾಳೆಯಿಂದ ಒಟ್ಟು ಐದು ದಿನ ಇಡಿ ಇಬ್ಬರು ನಟಿಯರು ಸೇರಿದಂತೆ ಐವರು ಆರೋಪಿಗಳು ವಿಚಾರಣೆಗೊಳಪಡಲಿದ್ದಾರೆ. ಇಡಿ ವಿಚಾರಣೆ ನಡೆಸಲಿರುವ ಹಿನ್ನೆಲೆಯಲ್ಲಿ ರವಿಶಂಕರ್, ವೀರೇನ್ ಖನ್ನಾ, ರಾಗಿಣಿ ದ್ವಿವೇದಿ, ರಾಹುಲ್ ಹಾಗೂ ಸಂಜನಾ ಗಲ್ರಾನಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com