ಬೆಂಗಳೂರಿನಲ್ಲಿ ಪೊಲೀಸ್ ಸರ್ಪಗಾವಲು; ಬಲವಂತದ ಬಂದ್ ಗೆ ಅವಕಾಶವಿಲ್ಲ: ಪೊಲೀಸ್‌ ಆಯುಕ್ತ ಕಮಲ್ ಪಂತ್ ಎಚ್ಚರಿಕೆ

ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ವೇಳೆ ಬಲವಂತವಾಗಿ ಬಂದ್ ಮಾಡಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್‌ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್ ಎಚ್ಚರಿಕೆ ನೀಡಿದ್ದಾರೆ. 
ಕಮಲ್ ಪಂತ್
ಕಮಲ್ ಪಂತ್

ಬೆಂಗಳೂರು: ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ವೇಳೆ ಬಲವಂತವಾಗಿ ಬಂದ್ ಮಾಡಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್‌ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್ ಎಚ್ಚರಿಕೆ ನೀಡಿದ್ದಾರೆ.

ಬಂದ್ ಸಂಬಂಧ ನಾವು ಯಾರಿಗೂ ಅನುಮತಿ ನೀಡಿಲ್ಲ. ನಮ್ಮಿಂದ ಯಾರೂ ಅನುಮತಿಯನ್ನು ಪಡೆದಿಲ್ಲ. ನಾವು ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ ಎಂದು ಹೇಳಿದರು.

ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಲು ಯತ್ನಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕೆಲವರಿಂದ ಬಾಂಡ್ ಬರೆಸಿಕೊಳ್ಳುತ್ತೇವೆ. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದರೆ ಅವರೇ ಹೊಣೆ ಹೊರಬೇಕಾಗುತ್ತದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com