ಅಕ್ರಮ ಮತದಾನ ಆರೋಪ ಅರ್ಜಿ ವಜಾ: ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಬೈ ಎಲೆಕ್ಷನ್ ಹಾದಿ ಸುಗಮ

ಮಸ್ಕಿ ಕ್ಷೇತ್ರದ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ಮತದಾನ ಮೂಲಕ ಗೆಲವು ಸಾಧಿಸಿದ್ದಾರೆಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಪ್ರತಾಪ್ ಗೌಡ ಪಾಟೀಲ್
ಪ್ರತಾಪ್ ಗೌಡ ಪಾಟೀಲ್
Updated on: 

ಕಲಬುರಗಿ: ಮಸ್ಕಿ ಕ್ಷೇತ್ರದ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ಮತದಾನ ಮೂಲಕ ಗೆಲವು ಸಾಧಿಸಿದ್ದಾರೆಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. 

ಪ್ರತಾಪ್ ಗೌಡ ಪಾಟೀಲ್ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಹೀಗಾಗಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಬಸನಗೌಡ ತುರವಿಹಾಳ ನ್ಯಾಯಾಲಯ ಮೆಟ್ಟಿಲು ಏರಿದ್ದರು. ಆದರೆ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಪಾಟೀಲರಿಗಿದ್ದ ಮಸ್ಕಿ ಉಪಚುನಾವಣೆಗಿದ್ದ ಅಡ್ಡಿ ನಿವಾರಣೆಯಾದಂತಾಗಿದೆ. 

ಕಾಂಗ್ರೆಸ್ ನಿಂದ ಗೆದ್ದಿದ್ದ ಪ್ರತಾಪ್ ಗೌಡ ಪಾಟೀಲ್ ಅವರು ಸಮ್ಮಿಶ್ರ ಸರ್ಕಾರದ ವೇಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಈ ಹಿನ್ನೆಲೆಯಲ್ಲಿ ಪ್ರತಾಪ್ ಗೌಡ ಅವರನ್ನು ಅನರ್ಹಗೊಳಿಸಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com