ಸಿಸಿಬಿ ಪೊಲೀಸ್ ಕಚೇರಿ
ಸಿಸಿಬಿ ಪೊಲೀಸ್ ಕಚೇರಿ

ಡ್ರಗ್ಸ್ ಪ್ರಕರಣ: ಸಿಸಿಬಿ ಪೊಲೀಸರಿಂದ ಮತ್ತೊಬ್ಬ ಆರೋಪಿ ಬಂಧನ

ಡ್ರಗ್ ಮಾಫಿಯಾ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಮಂಗಳೂರಿನ ಸಿಸಿಬಿ ಪೊಲೀಸರು ಮಂಗಳವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರು: ಡ್ರಗ್ ಮಾಫಿಯಾ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಮಂಗಳೂರಿನ ಸಿಸಿಬಿ ಪೊಲೀಸರು ಮಂಗಳವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರು ಪೊಲೀಸರು ಮುಂಬೈನಲ್ಲಿ ಈತನನ್ನು ಬಂಧಿಸಿದ್ದು, ಆರೋಪಿಯನ್ನು ಶಾನ್ ಎಂದು ಗುರುತಿಸಲಾಗಿದೆ.

ಶಾನ್ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೊಳಗಾದ ಡ್ರಗ್ಸ್ ಪೆಡ್ಲರ್ ಮತ್ತು ಡಾನ್ಸರ್ ಕಿಶೋರ್ ಶೆಟ್ಟಿಯ ಸ್ನೇಹಿತ ಎಂದು ಹೇಳಲಾಗಿದೆ.

ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಮೂರನೇ ಆರೋಪಿ ಮೊಹಮ್ಮದ್ ಶಕೀರ್ ಅವರೊಂದಿಗೆ ಸಹ ಶಾನ್ ಸಂಪರ್ಕ ಹೊಂದಿದ್ದನೆಂದು ತಿಳಿದುಬಂದಿದೆ.

ಮೂಲತಃ ಮಂಗಳೂರಿನ ಬಂದರು ನಿವಾಸಿಯಾಗಿರುವ ಶಾನ್, ತರುಣ್ ರಾಜ್‍ನ ಪಾರ್ಟಿಗಳಿಗೆ ಡ್ರಗ್ಸ್ ನೀಡುತ್ತಿದ್ದ. ಇತ್ತೀಚಿಗೆ ಬಂಧನವಾಗಿದ್ದ ಶಾಕೀರ್ ಮೂಲಕ ಡ್ರಗ್ಸ್ ಪಾರ್ಟಿಗಳಿಗೆ ಶಾನ್ ನಿಂದ ಡ್ರಗ್ಸ್ ಪೂರೈಕೆಯಾಗುತ್ತಿತ್ತು ಎಂಬ ಮಾಹಿತಿ ಆಧರದ ಮೇಲೆ ಪೊಲೀಸರು ಬಂಧಿಸಿದ್ದಾರೆ.

ಮುಂಬೈ, ಗೋವಾದಿಂದ ಡ್ರಗ್ಸ್ ತರಿಸಿಕೊಡುತ್ತಿದ್ದ ಶಾನ್, ರಾಜ್ಯದ ವಿವಿಧೆಡೆ ನಡೆಯುವ ಪಾರ್ಟಿಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದ್ದು, ಮಂಗಳೂರು ಸಿಸಿಬಿ ಪೋಲಿಸರು ತನಿಖೆಯನ್ನು ಮುಂದುವರಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com