ಎನ್‌ಎಲ್‌ಎಸ್‌ಐಯುನಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಶೇ 25 ಮೀಸಲು: ತಿದ್ದುಪಡಿ ಕಾಯ್ದೆಗೆ ಹೈಕೋರ್ಟ್ ತಡೆ

ರಾಜ್ಯದಲ್ಲಿ ಅಧ್ಯಯನ ಮಾಡಿದವರಿ ಕಾನೂನು ವಿಶ್ವವಿದ್ಯಾನಿಲಯದಲ್ಲಿ ಶೇ 25 ರಷ್ಟು ಮೀಸಲಾತಿ ನೀಡುವಂತೆ ಕರ್ನಾಟಕ ವಿಧಾನಸಭೆಯು ರಾಷ್ಟ್ರೀಯ ಕಾನೂನು ವಿದ್ಯಾಲಯ (ಎನ್‌ಎಲ್‌ಎಸ್‌ಐಯು) ಕಾಯ್ದೆಗೆ ತಂದ ತಿದ್ದುಪಡಿಗೆ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.
ಹೈಕೋರ್ಟ್
ಹೈಕೋರ್ಟ್
Updated on

ಬೆಂಗಳೂರು: ರಾಜ್ಯದಲ್ಲಿ ಅಧ್ಯಯನ ಮಾಡಿದವರಿ ಕಾನೂನು ವಿಶ್ವವಿದ್ಯಾನಿಲಯದಲ್ಲಿ ಶೇ 25 ರಷ್ಟು ಮೀಸಲಾತಿ ನೀಡುವಂತೆ ಕರ್ನಾಟಕ ವಿಧಾನಸಭೆಯು ರಾಷ್ಟ್ರೀಯ ಕಾನೂನು ವಿದ್ಯಾಲಯ (ಎನ್‌ಎಲ್‌ಎಸ್‌ಐಯು) ಕಾಯ್ದೆಗೆ ತಂದ ತಿದ್ದುಪಡಿಗೆ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.

ನ್ಯಾಯಮೂರ್ತಿ ಬಿ.ವಿ ನಾಗರತ್ನ ಮತ್ತು ನ್ಯಾಯಮೂರ್ತಿ ರವಿ ವಿ ಹೊಸ್ಮನಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಎನ್‌ಎಲ್‌ಎಸ್‌ಐಯು (ತಿದ್ದುಪಡಿ) ಕಾಯ್ದೆ 2020 ಜಾರಿಗೆ ತಡೆ ನೀಡಿ ತೀರ್ಪು ಪ್ರಕಟಿಸಿತು.

ತಿದ್ದುಪಡಿಯನ್ನು ಕಾಯ್ದೆಗೆ ವಿರುದ್ಧ ಎಂದಿರುವ ನ್ಯಾಯಪೀಠ, ತಿದ್ದುಪಡಿಯನ್ನು ತರಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ಕಾಲ ಅಧ್ಯಯನ ಮಾಡಿದವರಿಗೆ ಎನ್‌ಎಲ್‌ಎಸ್‌ಐಯುನಲ್ಲಿ ಶೇ 25 ರಷ್ಟು ಮೀಸಲಾತಿ ನೀಡಲು ಮಾರ್ಚ್‌ನಲ್ಲಿ ರಾಜ್ಯ ವಿಧಾನಸಭೆ ಎನ್‌ಎಲ್‌ಎಸ್‌ಐಯು (ತಿದ್ದುಪಡಿ) ಕಾಯ್ದೆ 2020 ಅನ್ನು ಅಂಗೀಕರಿಸಿತು.

ತಿದ್ದುಪಡಿಯ ವಿರುದ್ಧ ಕಾನೂನು ವಿದ್ಯಾರ್ಥಿಗಳು ಮತ್ತು ಇತರರು ನ್ಯಾಯಾಲಯಕ್ಕೆ ರಿಟ್ ಅರ್ಜಿಗಳನ್ನು ಸಲ್ಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com