ಕೊರೋನಾ ಮಾರ್ಗಸೂಚಿ ನಿರ್ಲಕ್ಷಿಸಿದರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಜೊತೆ ಚರ್ಚಿಸಿ ದಂಡ, ಶಿಕ್ಷೆ ಪ್ರಮಾಣ ಪ್ರಕಟ; ಡಾ.ಸುಧಾಕರ್

ಕೊರೋನಾ ನಿಯಂತ್ರಣ ಕ್ರಮಗಳ ಬಗ್ಗೆ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಕೆ ಸುಧಾಕರ್
ಕೆ ಸುಧಾಕರ್

ಬೆಂಗಳೂರು: ಕೊರೋನಾ ನಿಯಂತ್ರಣ ಕ್ರಮಗಳ ಬಗ್ಗೆ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಮಾಸ್ಕ್‌ ಧರಿಸದ, ಭೌತಿಕ ಅಂತರ ಕಾಯ್ದುಕೊಳ್ಳದ, ಸಭೆ-ಸಮಾರಂಭ ನೆಪದಲ್ಲಿ ಜನದಟ್ಟಣೆಗೆ ಅವಕಾಶ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಅವರ ಜತೆ ಚರ್ಚಿಸಿ ಒಂದೆರಡು ದಿನದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಮಂಗಳವಾರ ತಜ್ಞರು ಮತ್ತು ಅಧಿಕಾರಿಗಳ ಸಭೆ ಬಳಿಕ ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಲಾಕ್ ಡೌನ್ ತೆರವು ಬಳಿಕ ಕಳೆದೆರಡು ತಿಂಗಳಿಂದ ರಾಜ್ಯದಲ್ಲಿ ಕೊರೋನ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಎಷ್ಟೇ ಜಾಗೃತಿ ಮೂಡಿಸಿದರೂ ಸಾರ್ವಜನಿಕರು ಸರ್ಕಾರದ ಸೂಚನೆಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. 

ಈಗಿರುವ ಏಕೈಕ ಮಾರ್ಗವೆಂದರೆ ಕಠಿಣ ಕಾನೂನು ಜಾರಿಗೆ ತರುವುದು. ಸರಕಾರದ ಮಾರ್ಗಸೂಚಿ ಅನುಸರಿಸದವರ ವಿರುದ್ದ ಕಠಿಣ ಶಿಕ್ಷೆ ಹಾಗೂ ದಂಡ ಪ್ರಯೋಗ ಅನಿವಾರ್ಯ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com