ಸಾಧಿಕ್ ಪಾಳ್ಯದಲ್ಲಿ ನರ್ಸ್ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಕ್ರಮ- ಬಿ.ಶ್ರೀರಾಮುಲು

ಮನೆ ಬಾಗಿಲಿಗೆ ಬಂದು ಕೋವಿ ಡ್‌-19 ಬಗ್ಗೆ ಜಾಗೃತಿ ಮೂಡಿಸುವ ವೈದ್ಯರು, ನರ್ಸ್ ಗಳು, ಆಶಾ ಕಾರ್ಯಕರ್ತರು ಹಾಗೂ ಈ ಸಂಕಷ್ಟದ ಸಮಯದಲ್ಲಿ ಹಗಲಿರುಳು ದುಡಿಯುತ್ತಿರುವವರು ದೇವರ ಸಮಾನ. ಅವರನ್ನು ಗೌರವದಿಂದ ನೋಡಿ. ಅವರ ಮೇಲೆ ಹಲ್ಲೆ ನಡೆದರೆ ನೋಡಿಕೊಂಡು ಸುಮ್ಮನೆ ಕೂರಲಾಗುವುದಿಲ್ಲ. ಎಚ್ಚರವಿರಲಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಹೇಳಿದ್
ಬಿ.ಶ್ರೀರಾಮುಲು
ಬಿ.ಶ್ರೀರಾಮುಲು

ಬೆಂಗಳೂರು: ಮನೆ ಬಾಗಿಲಿಗೆ ಬಂದು ಕೋವಿ ಡ್‌-19 ಬಗ್ಗೆ ಜಾಗೃತಿ ಮೂಡಿಸುವ ವೈದ್ಯರು, ನರ್ಸ್ ಗಳು, ಆಶಾ ಕಾರ್ಯಕರ್ತರು ಹಾಗೂ ಈ ಸಂಕಷ್ಟದ ಸಮಯದಲ್ಲಿ ಹಗಲಿರುಳು ದುಡಿಯುತ್ತಿರುವವರು ದೇವರ ಸಮಾನ. ಅವರನ್ನು ಗೌರವದಿಂದ ನೋಡಿ. ಅವರ ಮೇಲೆ ಹಲ್ಲೆ ನಡೆದರೆ ನೋಡಿಕೊಂಡು ಸುಮ್ಮನೆ ಕೂರಲಾಗುವುದಿಲ್ಲ. ಎಚ್ಚರವಿರಲಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಲ್ಲಿ ಜಾತಿ, ಮತ, ಧರ್ಮ ಮುಖ್ಯವಲ್ಲ. ನಿಮ್ಮ ವೈಯಕ್ತಿಕ ಹಿತಾಸಕ್ತಿ ಮುಖ್ಯವಲ್ಲ. ಕೋಟ್ಯಂತರ ಕನ್ನಡಿಗರ, ಭಾರತೀಯರ ಆರೋಗ್ಯ ಮುಖ್ಯ. ‌ಬೆಂಗಳೂರಿನ ಸಾಧಿಕ್ ಪಾಳ್ಯದಲ್ಲಿ ಕೆಲವು ಕಿಡಿಗೇಡಿಗಳು ಸೇರಿ ನರ್ಸ್ ಮೇಲೆ ಹಲ್ಲೆ ಮಾಡಿದ್ದು ಅತ್ಯಂತ ಹೇಯ ಕೃತ್ಯ. ಯಾರೇ ಆಗಲಿ, ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನುರೀತ್ಯ ಕ್ರಮ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

ಸರಾಯಿ ಪಾಳ್ಯದ ಸಾಧಿಕ್ ಪಾಳ್ಯದಲ್ಲಿ ಆಶಾ ಕಾರ್ಯಕರ್ತರು ಆರೋಗ್ಯ ಸಮೀಕ್ಷೆ ನಡೆಸಲು ತೆರಳಿದ್ದಾಗ ಸ್ಥಳೀಯರು ಅವರ ಮೇಲೆ ಹಲ್ಲೆಗೆ ಯತ್ನಿಸಿ ಅವರ ಮೊಬೈಲ್ ಕಿತ್ತುಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com