ಲಾಕ್‌ಡೌನ್‌: ಬಡವರಿಗೆ ಉಚಿತ ಹಾಲು ನೀಡುವ ಯೋಜನೆಗೆ ಸಿಎಂ ಬಿಎಸ್‌ವೈ ಚಾಲನೆ

ಬಡವರಿಗೆ ಉಚಿತ ಹಾಲು ವಿತರಿಸುವ ಯೋಜನೆಗೆ ಬೆಂಗಳೂರಿನ ಅಶ್ವಥ್ ನಗರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಚಾಲನೆ ನೀಡಿದರು.
ಬಿಎಸ್ ವೈ
ಬಿಎಸ್ ವೈ

ಬೆಂಗಳೂರು: ಬಡವರಿಗೆ ಉಚಿತ ಹಾಲು ವಿತರಿಸುವ ಯೋಜನೆಗೆ ಬೆಂಗಳೂರಿನ ಅಶ್ವಥ್ ನಗರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಚಾಲನೆ ನೀಡಿದರು.

ಕೆಎಂಎಫ್​ನ ಹೆಚ್ಚುವರಿ ಹಾಲನ್ನು ಖರೀದಿಸಿ ಬಡವರಿಗೆ ವಿಸ್ತರಿಸುವ ಯೋಜನೆ ಇದಾಗಿದೆ. ಮುಖ್ಯಮಂತ್ರಿ ಮತ್ತು ಸಚಿವರ ತಂಡ ಈ ಪ್ರದೇಶದಲ್ಲಿ ಮನೆ ಮನೆಗೂ ತೆರಳಿ ಹಾಲು ವಿತರಿಸುವ ಮೂಲಕ ಈ ಯೋಜನೆಗೆ ಚಾಲನೆ ನೀಡಿದರು. ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಸಚಿವ ಶಿವರಾಮ್ ಹೆಬ್ಬಾರ್ ಮೊದಲಾದವರು ಮುಖ್ಯಮಂತ್ರಿಗೆ ಸಾಥ್ ನೀಡಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕೊರೊನಾ ಸೋಂಕು ನಿರ್ಮೂಲನೆಗಾಗಿ ಲಾಕ್ ಡೌನ್ ಜಾರಿಯಲ್ಲಿದ್ದಾಗಲೂ ರೈತರಿಂದ ಅಬಾಧಿತವಾಗಿ ಹಾಲು ಖರೀದಿಸಲು ಕೆಎಂಎಫ್ ಗೆ ಸೂಚಿಸಲಾಗಿತ್ತು‌. ಹಾಗೆ ರೈತರಿಂದ ಖರೀದಿಸಲಾಗುತ್ತಿರುವ ಹಾಲಿನ ಪೈಕಿ ಸುಮಾರು 7.5 ಲಕ್ಷ ಲೀಟರ್ ಹಾಲನ್ನು ಬಡವರಿಗೆ ಉಚಿತವಾಗಿ ಹಂಚಬೇಕು ಎಂಬ ನಿರ್ಧಾರಕ್ಕೆ ಬಂದಿದ್ದೆವು. ಅದರಂತೆ ಇಂದಿನಿಂದ ಬೆಂಗಳೂರಿನ ಅಶ್ವತ್ಥ ನಗರದ ಕೊಳಗೇರಿ ನಿವಾಸಿಗಳಿಗೆ ಉಚಿತವಾಗಿ ಹಾಲು ವಿತರಿಸುವುದರ ಮೂಲಕ ಈ ವ್ಯವಸ್ಥೆಗೆ ಚಾಲನೆ ನೀಡಲಾಯಿತು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com