ಕೋವಿಡ್-19: ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ 200 ಹಾಸಿಗೆಯುಳ್ಳ ಕ್ವಾರೆಂಟೈನ್ ವ್ಯವಸ್ಥೆ 

ಕೋವಿಡ್ -19 ರೋಗಿಗಳು ಹಾಗೂ ಶಂಕಿತರ ಚಿಕಿತ್ಸೆಗಾಗಿ ಬೆಂಗಳೂರಿನ  ಸೆಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ  200 ಹಾಸಿಗೆಯುಳ್ಳ ಕ್ವಾರೆಂಟೈನ್ ವ್ಯವಸ್ಥೆ ಮಾಡಲಾಗಿದೆ.
ಸೆಂಟ್ ಜಾನ್ಸ್ ಆಸ್ಪತ್ರೆ
ಸೆಂಟ್ ಜಾನ್ಸ್ ಆಸ್ಪತ್ರೆ

ಬೆಂಗಳೂರು: ಕೋವಿಡ್ -19 ರೋಗಿಗಳು ಹಾಗೂ ಶಂಕಿತರ ಚಿಕಿತ್ಸೆಗಾಗಿ ಬೆಂಗಳೂರಿನ  ಸೆಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ  200 ಹಾಸಿಗೆಯುಳ್ಳ ಕ್ವಾರೆಂಟೈನ್ ವ್ಯವಸ್ಥೆ ಮಾಡಲಾಗಿದೆ.

ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ ನಾರಾಯಣ್, ಬಿಬಿಎಂಪಿ ಆಯುಕ್ತ ಬಿಹೆಚ್ ಅನಿಲ್ ಕುಮಾರ್ ಹಾಗೂ ಮೇಯರ್ ಗೌತಮ್ ಕುಮಾರ್ ಅವರೊಂದಿಗೆ ನಡೆದ ಸಭೆಯಲ್ಲಿ ಆಸ್ಪತ್ರೆ ಆಡಳಿತ ಮಂಡಳಿ ಈ ಬಗ್ಗೆ ಮಾಹಿತಿ ನೀಡಿತು.

ಸರ್ಜಾಪುರ ರಸ್ತೆಯಲ್ಲಿರುವ ಈ ಘಟಕದಲ್ಲಿ ಸೂಕ್ತ ವೆಂಟಿಲೇಟರ್ ಹಾಗೂ ಐಸೋಲೇಷನ್ ಕೊಠಡಿಗಳು ಇರಲಿವೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ ತಿಳಿಸಿದರು.

ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ರೋಗಿಗಳನ್ನು ಹೇಗೆ ನಿರ್ವಹಣೆ ಮಾಡಬೇಕೆಂಬ ಬಗ್ಗೆ ಎಲ್ಲಾ ಸಿಬ್ಬಂದಿಗಳಿಗೂ ತರಬೇತಿ ನೀಡಲಾಗಿದೆ. 15 ಐಸಿಯು ಹಾಸಿಗೆಗಳು ಮತ್ತು ಸಹಾಯಕ ಸಿಬ್ಬಂದಿಗಳೊಂದಿಗೆ ತಜ್ಞ ವೈದ್ಯರನ್ನೊಗೊಂಡ ತಂಡವೊಂದನ್ನು ರಚಿಸಲಾಗಿದೆ ಎಂದು ಆಸ್ಪತ್ರೆ ನಿರ್ದೇಶಕ ಡಾ. ಪೌಲ್  ಪಾರ್ಥಜಾಮ್ ತಿಳಿಸಿದ್ದಾರೆ. 

ಕೋವಿಡ್-19 ರೋಗಿಗಳು ಅಥವಾ ಶಂಕಿತರ ತಪಾಸಣೆ, ಐಸೋಲೇಷನ್ ಮತ್ತು ಆರೈಕೆಗಾಗಿ ವಿಶೇಷ ವ್ಯವಸ್ಥೆಯನ್ನು ಮಾಜಲಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.

ಮಾಸ್ಕ್ ಗಳು, ಪಿಪಿಪಿ ಕಿಟ್ಸ್ ಮತ್ತು ಸ್ಯಾನಿಟೈಸರ್ಸ್ ಗಳನ್ನು ಸೆಂಟ್  ಜಾನ್ಸ್ ಆಸ್ಪತ್ರೆಯೇ ಉತ್ಪಾದಿಸಿ ಪೂರೈಕೆ ಮಾಡುತ್ತಿದೆ. ಯಾವುದೇ ಮಾಹಿತಿಗಾಗಿ ಸಾರ್ವಜನಿಕರು ದೂ. 080-66744788 ಅಥವಾ ಆಸ್ಪತ್ರೆಯ ವೆಬ್ ಸೈಟ್ ಸಂಪರ್ಕಿಸಬಹುದು. ಇದರ ಜೊತೆಗೆ ಬಿಬಿಎಂಪಿ ಬೆಂಗಳೂರು ನಗರದಾದ್ಯಂತ 31 ಜ್ವರದ ಕ್ಲಿನಿಕ್ ಗಳನ್ನು ಸ್ಥಾಪಿಸಿದೆ. ಇತ್ತೀಚಿಗೆ 17 ಆಸ್ಪತ್ರೆಗಳನ್ನು ಕ್ವಾರಂಟೈನ್ ವಲಯಗಳಾಗಿ ಪರಿವರ್ತಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com