ಕರ್ನಾಟಕ-ಕೇರಳ ಗಡಿ ಬಂದ್: ರಾಜ್ಯದ ನಡೆಗೆ ಎಚ್.ಡಿ.ದೇವೇಗೌಡ ಬೇಸರ

 ಕರ್ನಾಟಕ ಕೇರಳ ಗಡಿ ಪ್ರವೇಶ ವಿಚಾರವಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ರ ಬರೆದಿದ್ದಾರೆ‌ 
ಎಚ್‌ಡಿ ದೇವೇಗೌಡ
ಎಚ್‌ಡಿ ದೇವೇಗೌಡ

ಬೆಂಗಳೂರು: ಕರ್ನಾಟಕ ಕೇರಳ ಗಡಿ ಪ್ರವೇಶ ವಿಚಾರವಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ರ ಬರೆದಿದ್ದಾರೆ‌

ಕಾಸರಗೋಡುನಿಂದ ಮಂಗಳೂರಿಗೆ ಆಂಬುಲೆನ್ಸ್ ಮತ್ತು ಅಗತ್ಯ ಸಾಮಾಗ್ರಿಗಳ ಸಾಗಾಟ ಬಂದಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ನಿನ್ನೆ ಪತ್ರ ಬರೆದಿದ್ದರು.

ಕಾಸರಗೋಡಿನ‌ ಕನ್ನಡಿಗರು ಅನೇಕರು ಚಿಕಿತ್ಸೆ ಇಲ್ಲದೆ ಪರದಾಡುತ್ತಿದ್ದಾರೆ. ತುರ್ತು ಸನ್ನಿವೇಶದಲ್ಲಿ ರಾಜ್ಯ ಪ್ರವೇಶಿಸಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದೆ. ಆದರೆ ಕರ್ನಾಟಕ ಸರ್ಕಾರ ತಮ್ಮ ಮನವಿಯನ್ನು ನಿರಾಕರಿಸಿದೆ. ರಾಜ್ಯ ಸರ್ಕಾರದ ಈ‌ ನಡೆಯನ್ನು ತಾವು ಖಂಡಿಸುವುದಾಗಿ ಪತ್ರದಲ್ಲಿ ಹೇಳಿದ್ದಾರೆ.

ಲಾಕ್‌ಡೌನ್ ಮೊದಲು ಪ್ರಧಾನಿಗಳೆ ಆಶ್ವಾಸನೆ ನೀಡಿದ, ಆಸ್ಪತ್ರೆ ಮತ್ತು ಅಗತ್ಯ ವಸ್ತುಗಳಿಗೆ ತೊಂದರೆ ಆಗುವುದಿಲ್ಲ ಎಂದು ಭರವಸೆ ನೀಡಿದ್ದರು. ಆದರೆ ಈಗ ಅದೇ ಅಗತ್ಯ ವಸ್ತುಗಳಿಗೆ ವ್ಯತ್ಯಯವಾಗುತ್ತಿದೆ. ಕಾಸರಗೋಡು ಹಾಗೂ ಮಂಗಳೂರು ಗಡಿ ವಿಚಾರದ ಬಗ್ಗೆ ಪ್ರಧಾನಿಗಳ ಗಮನ ಸೆಳೆಯಲು ಅವರಿಗೂ ಪತ್ರ ಬರೆದು ಆಸ್ಪತ್ರೆ ಮತ್ತು ಅಗತ್ಯ ವಸ್ತುಗಳ ಸಾಗಾಟಕ್ಕೆ ಅನುವು ಮಾಡಿ ಕೊಡಲು ಮನವಿ ಮಾಡುವುದಾಗಿ ಪಿಣರಾಯಿ ವಿಜಯನ್‌ಗೆ ಪತ್ರದಲ್ಲಿ ದೇವೇಗೌಡ ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com