ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬಂಬೂ ಬಜಾರ್ ನಲ್ಲಿ ಭಾರೀ ಬೆಂಕಿ ಅವಘಡ, 10 ಅಂಗಡಿಗಳು ಭಸ್ಮ

ರಾಜಧಾನಿ ಬೆಂಗಳೂರಿನ ಬಂಬೂ ಬಜಾರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ಅಂಗಡಿಗಳು ಸುಟ್ಟು ಭಸ್ಮವಾಗಿರುವುದಾಗಿ ಅಗ್ನಿಶಾಮಕ ದಳದ ಮೂಲಗಳಿಂದ ತಿಳಿದುಬಂದಿದೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಬಂಬೂ ಬಜಾರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ಅಂಗಡಿಗಳು ಸುಟ್ಟು ಭಸ್ಮವಾಗಿರುವುದಾಗಿ ಅಗ್ನಿಶಾಮಕ ದಳದ ಮೂಲಗಳಿಂದ ತಿಳಿದುಬಂದಿದೆ

ಇಂದು ಬೆಳಗ್ಗೆ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿಯೇ ಇತರ ಅಂಗಡಿಗಳಿಗೂ ವ್ಯಾಪಿಸಿದೆ ಎಂದು ಅವರು ತಿಳಿಸಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ತಲುಪುವಷ್ಟರಲ್ಲಿ ನಾಲ್ಕು ಅಂಗಡಿಗಳಿಗೂ ಬೆಂಕಿಯ ಜ್ವಾಲೆ ವ್ಯಾಪಿಸಿ ಸುಟ್ಟು ಭಸ್ಮವಾಗಿದ್ದವು ಎಂಬುದಾಗಿ ಅಗ್ನಿಶಾಮಕ ಇಲಾಖೆ ಮೂಲಗಳಿಂದ ತಿಳಿದುಬಂದಿದೆ. 

ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತ್ತೊಟಿಗೆ ತಂದಿದ್ದರಿಂದ ಕನಿಷ್ಠ 10 ಅಂಗಡಿಗಳು ಬೆಂಕಿಗೆ ಅಹುತಿಯಾದವು. ಇಲ್ಲದಿದ್ದರೆ ಇದು ಇನ್ನಷ್ಟು ಆಪಾಯಕ್ಕೆ ಕಾರಣವಾಗುವ  ಸಾಧ್ಯತೆ ಹೆಚ್ಚಾಗಿತ್ತು. 

ಅಗ್ನಿ ಶಾಮಕ ಸಿಬ್ಬಂದಿ ತೀವ್ರ ಕಾರ್ಯಾಚರಣೆ ಮೂಲಕ ಇತರ ವಸತಿ ಪ್ರದೇಶಗಳಿಗೆ ಬೆಂಕಿಯ ಜ್ವಾಲೆ ವ್ಯಾಪಿಸದಂತೆ ನೋಡಿಕೊಂಡರು. 

Related Stories

No stories found.

Advertisement

X
Kannada Prabha
www.kannadaprabha.com