ದಿಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದವರನ್ನು ಬೆಳಗಾವಿ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ- ಲಕ್ಷ್ಮಣ ಸವದಿ

ದೆಹಲಿಯ ನಿಜಾಮುದ್ದೀನ್ ಮರ್ಜಕ್‍ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬೆಳಗಾವಿ ಜಿಲ್ಲೆಗೆ 62 ಜನ ಬಂದಿದ್ದಾರೆ. 62 ಜನರ ಪೈಕಿ 32 ಜನರ ಗಂಟಲು ಮಾದರಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ದಿಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದವರನ್ನು ಬೆಳಗಾವಿ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ- ಲಕ್ಷ್ಮಣ ಸವದಿ

ಬೆಳಗಾವಿ: ದೆಹಲಿಯ ನಿಜಾಮುದ್ದೀನ್ ಮರ್ಜಕ್‍ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬೆಳಗಾವಿ ಜಿಲ್ಲೆಗೆ 62 ಜನ ಬಂದಿದ್ದಾರೆ. 62 ಜನರ ಪೈಕಿ 32 ಜನರ ಗಂಟಲು ಮಾದರಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೆಹಲಿಯ ನಿಜಾಮುದ್ದೀನ್ ಮರ್ಕಜ್‍ನಲ್ಲಿ ನಡೆದ ಧಾರ್ಮಿಕ ಸಭೆಯಿಂದ ಜಿಲ್ಲೆಗೆ ಆಗಮಿಸಿದವರ ಬಗ್ಗೆ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಇದುವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಪಾಸಿಟಿವ್ ಕೇಸ್ ಸಿಕ್ಕಿಲ್ಲ. ಕೊರೋನಾ ತಡೆಗೆ ಬೆಳಗಾವಿ ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಒಂದೇ ಮದ್ದು ಎಂದು ಹೇಳಿದರು.

ಕೊರೋನಾ ಸೋಂಕು ತಡೆಗಟ್ಟುವ ಉದ್ದೇಶದಿಂದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅಗತ್ಯ ಸಾಮಗ್ರಿ ಪೂರೈಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರತಿ ನ್ಯಾಯಬೆಲೆ ಅಂಗಡಿಗಳಿಗೆ ವಾಹನ ಕೊಟ್ಟು ಮನೆಮನೆಗೆ ಪಡಿತರ ವಿತರಣೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com