ನಿಜಾಮುದ್ದೀನ್ ಮರ್ಕಜ್ ಮಸೀದಿಗೆ ತೆರಳಿದ್ದ ಕಲಬುರಗಿಯ 26 ಮಂದಿಯಲ್ಲಿ ಕೊರೋನಾ ವೈರಸ್ ಸೋಂಕಿಲ್ಲ: ಜಿಲ್ಲಾಧಿಕಾರಿ ಶರತ್

ಇತ್ತೀಚೆಗೆ ದೆಹಲಿಯ ನಿಜಾಮುದ್ದೀನ್‍ನಲ್ಲಿ ಜರುಗಿದ ತಬ್ಲೀಗ್ ಜಮಾತ್ ನ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಜಿಲ್ಲೆಗೆ ಮರಳಿದ್ದ 26 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿಲ್ಲ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಹೇಳಿದ್ದಾರೆ.

Published: 03rd April 2020 09:17 PM  |   Last Updated: 03rd April 2020 09:17 PM   |  A+A-


Kalaburagi DC Sharath

ಕಲಬುರಗಿ ಡಿಸಿ ಶರತ್

Posted By : Srinivasamurthy VN
Source : The New Indian Express

ಕಲಬುರಗಿ: ಇತ್ತೀಚೆಗೆ ದೆಹಲಿಯ ನಿಜಾಮುದ್ದೀನ್‍ನಲ್ಲಿ ಜರುಗಿದ ತಬ್ಲೀಗ್ ಜಮಾತ್ ನ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಜಿಲ್ಲೆಗೆ ಮರಳಿದ್ದ 26 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿಲ್ಲ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಹೇಳಿದ್ದಾರೆ.

ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಶರತ್ ಅವರು, ಇತ್ತೀಚೆಗೆ ಪರೀಕ್ಷೆಗೆ ಕಳುಹಿಸಲಾಗಿದ್ದ 26 ಮಂದಿಯ ವೈದ್ಯಕೀಯ ವರದಿ ತಮ್ಮ  ಕೈಸೇರಿದ್ದು, ಎಲ್ಲ 26 ಮಂದಿಯಲ್ಲಿ ಕೊರೋನಾ ವೈರಸ್ ದೃಢಪಟ್ಟಿಲ್ಲ ಎಂದು ಹೇಳಿದ್ದಾರೆ. ಈ ಎಲ್ಲ 26 ಮಂದಿ ಇತ್ತೀಚೆಗೆ ದೆಹಲಿಯ  ನಿಜಾಮುದ್ದೀನ್‍ನಲ್ಲಿ ಜರುಗಿದ ತಬ್ಲೀಗ್ ಜಮಾತ್ ನ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಜಿಲ್ಲೆಗೆ ಮರಳಿದ್ದರು. ಹೀಗಾಗಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿತ್ತು. ಆದರೆ ಈಗ ಇವರಲ್ಲಿ ಸೋಂಕು ಅಂಟಿಲ್ಲ ಎಂಬ ವಿಚಾರ ಜಿಲ್ಲೆಯ  ನಾಗರಿಕರು ನಿಟ್ಟಿಸಿರು ಬಿಡುವಂತೆ ಮಾಡಿದೆ.

ಪ್ರಸ್ತುತ ಈ ಎಲ್ಲ 26 ಮಂದಿ ಕ್ವಾರಂಟೈನ್ ನಲ್ಲಿದ್ದ ಆರೋಗ್ಯಾಧಿಕಾರಿಗಳೊಂದಿಗೆ ಚರ್ಚೆ ಮಾಡಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶರತ್ ಹೇಳಿದ್ದಾರೆ.

ಈ ಹಿಂದೆ ಕಲಬುರಗಿ ಜಿಲ್ಲೆಯಿಂದ ದೆಹಲಿಯ ಧಾರ್ಮಿಕ ಸಭೆಗೆ ತೆರಳಿದ್ದ 65 ವರ್ಷದ ವೃದ್ಧ ಜಿಲ್ಲೆಗೆ ವಾಪಸ್ ಆಗಿ ಸಾವನ್ನಪ್ಪಿದ್ದರು. ಅವರಲ್ಲಿ ಕೊರೋನಾ ವೈರಸ್ ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಅವರ ಕುಟುಂಬಸ್ಥರನ್ನು ಕ್ವಾರಂಟೈನ್ ಮಾಡಲಾಗಿತ್ತು. ಈ ಪೈಕಿ ಅವರ ಪುತ್ರಿಯಲ್ಲೂ  ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಅವರೂ ಕೂಡ ಇದೀಗ ಚೇತರಿಸಿಕೊಂಡಿದ್ದಾರೆ.

Stay up to date on all the latest ರಾಜ್ಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp